ಶಿರಾಡಿ ಘಾಟಿ: ದಕ್ಷಿಣ ಕನ್ನಡ, ಹಾಸನ ಜಿಲ್ಲಾಧಿಕಾರಿಗಳಿಂದ ಜಂಟಿ ಸಮೀಕ್ಷೆ

 ಶಿರಾಡಿ ಘಾಟಿ: ದಕ್ಷಿಣ ಕನ್ನಡ, ಹಾಸನ ಜಿಲ್ಲಾಧಿಕಾರಿಗಳಿಂದ ಜಂಟಿ ಸಮೀಕ್ಷೆ
Share this post

ಮಂಗಳೂರು, ಆ.21, 2021: ಶಿರಾಡಿ ಘಾಟಿಯಲ್ಲಿ ಭೂಕುಸಿತ ಉಂಟಾದ ಕಾರಣ ರಸ್ತೆಯ ಎರಡು ಬದಿಯಲ್ಲಿ ಭಾರಿ ವಾಹನಗಳ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.

ಭೂ ಕುಸಿತವಾದ ಸ್ಥಳ ಹಾಗೂ ವಾಹನಗಳ ಸಂಚಾರದ ಸ್ಥಿತಿಗತಿಗಳನ್ನು ಪರಿಶೀಲಿಸಲು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಹಾಗೂ ಹಾಸನ ಜಿಲ್ಲಾಧಿಕಾರಿ ಗಿರೀಶ್ ಅವರು ಆಗಸ್ಟ್ 21ರ ಶನಿವಾರ ಜಂಟಿ ಸಮೀಕ್ಷೆ ನಡೆಸಿದರು.

ಈ ಸಂದರ್ಭದಲ್ಲಿ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರು, ಹಾಸನದ ವಿಶೇಷ ಭೂಸ್ವಾಧೀನಾಧಿಕಾರಿಗಳು, ಪುತ್ತೂರು ಉಪವಿಭಾಗಾಧಿಕಾರಿ, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ಅಧಿಕಾರಿಗಳು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!