ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ

 ಹೊಸ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನ
Share this post

ಮಂಗಳೂರು ಆ.24, 2021: ಕೋಡಿಕಲ್ ಪ್ರದೇಶದಲ್ಲಿ ನ್ಯಾಯಬೆಲೆ ಅಂಗಡಿ ತೆರೆಯಲು ಅರ್ಜಿ ಆಹ್ವಾನಿಸಲಾಗಿದೆ.

ಹೊಸ ನ್ಯಾಯಬೆಲೆ ಅಂಗಡಿ ತೆರೆಯುವ ಬಗ್ಗೆ 2020ರ ತಿದ್ದುಪಡಿ ಆದೇಶದ ಕ್ಲಾಸ್ -6 ರಂತೆ ಅರ್ಹ ಸಂಘ ಸಂಸ್ಥೆಗಳಿಂದ ನಮೂನೆ ಎ ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಅವುಗಳನ್ನು ಆದ್ಯತೆಯ ಮೇರೆಗೆ ಪರಿಗಣಿಸಲಾಗುವುದು.

2021 ರ ಆಗಸ್ಟ್ 23 ರಿಂದ ಸೆಪ್ಟೆಂಬರ್ 22 ರವರೆಗೆ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಅರ್ಜಿ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯನ್ನು ಸಂಪರ್ಕಿಸುವಂತೆ ಆಹಾರ, ನಾಗರಿಕ ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!