ಅಕ್ಟೋಬರ್ ಅಂತ್ಯದವರೆಗೆ ಮತದಾರರ ಪಟ್ಟಿ ಪರಿಷ್ಕರಣಾ ಕಾರ್ಯ
ಮಂಗಳೂರು, ಆ.24, 2021: ಜಿಲ್ಲೆಯ ಮತದಾರರ ಪಟ್ಟಿ ಪೂರ್ವ ಪರಿಷ್ಕರಣಾ ಕಾರ್ಯ ಈಗಾಗಲೇ ಆರಂಭಗೊಂಡಿದ್ದು, ಅಕ್ಟೋಬರ್ 31, 2021ರ ವರೆಗೆ ನಡೆಯಲಿದೆ. ನವೆಂಬರ್ 1, 2021 ರಂದು ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು.
ನವೆಂಬರ್ 1 ರಿಂದ 30, 2021ರ ವರೆಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸ್ವೀಕರಿಸಲು ಅವಧಿ ನಗಧಿ ಪಡಿಸಲಾಗಿದೆ. ಹಕ್ಕು ಮತ್ತು ಆಕ್ಷೇಪಣೆಗಳ ವಿಲೇವಾರಿ ಡಿಸೆಂಬರ್ 20ರಂದು ನಡೆಯಲಿದ್ದು, ಜನವರಿ 5, 2022 ರಂದು ಅಂತಿಮ ಮತದಾರರ ಪಟ್ಟಿ ಪ್ರಕಟವಾಗಲಿದೆ.
ಜಿಲ್ಲೆಯ ಮತದಾರರ ನೋಂದಣಾಧಿಕಾರಿ ಅಥವಾ ಸಹಾಯಕ ಮತದಾರರ ನೋಂದಣಾಧಿಕಾರಿಯವರ ವಿವರ ಇಂತಿವೆ:
ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ವಿಧಾನಸಭಾ ಕ್ಷೇತ್ರದ ಮತದಾರರ ನೋಂದಣಾಧಿಕಾರಿಯಾಗಿ ಪುತ್ತೂರಿನ ಸಹಾಯಕ ಆಯುಕ್ತ ಡಾ. ಯತೀಶ್ ಉಳ್ಳಾಲ್ ಅವರನ್ನು ನಿಯೋಜಿಸಲಾಗಿದೆ. ಮೊಬೈಲ್ ನಂಬರ್ : 9482326262.
- ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಬೆಳ್ತಂಗಡಿ ತಹಶೀಲ್ದಾರ್ ಅವರನ್ನು ನಿಯೋಜಿಸಲಾಗಿದೆ. (9902434583).
- ಸುಳ್ಯ ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಸುಳ್ಯ ತಹಶೀಲ್ದಾರ್ ಅನಿತಾ ಲಕ್ಷ್ಮೀ ಅವರನ್ನು ನಿಯೋಜಿಸಲಾಗಿದೆ. (70429 76487).
- ಪುತ್ತೂರು ವಿಧಾನಸಭಾ ಕ್ಷೇತ್ರದ ಸಹಾಯಕ ಮತದಾರರ ನೋಂದಣಾಧಿಕಾರಿಯಾಗಿ ಪುತ್ತೂರು ತಹಶೀಲ್ದಾರ್ ರಮೇಶ್ ಬಾಬು ಅವರನ್ನು ನಿಯೋಜಿಸಲಾಗಿದೆ. (94801 68864).
ಮೂಡಬಿದ್ರೆ, ಮಂಗಳೂರು ನಗರ ಉತ್ತರ, ಮಂಗಳೂರು ನಗರದ ದಕ್ಷಿಣ, ಮಂಗಳೂರು ಹಾಗೂ ಬಂಟ್ವಾಳ ವಿಧಾನಸಭಾ ಕ್ಷೇತ್ರಕ್ಕೆ ಮಂಗಳೂರು ಸಹಾಯಕ ಆಯುಕ್ತ ಮದನ್ ಮೋಹನ್ ಮತದಾರರ ನೋಂದಣಾಧಿಕಾರಿಯಾಗಿದ್ದಾರೆ. ಅವರ ಮೊಬೈಲ್ ನಂಬರ್-99723 56999.
ಈ ವಿಧಾನಸಭಾ ಕ್ಷೇತ್ರಗಳ ಸಹಾಯಕ ಮತದಾರರ ನೋಂದಣಾಧಿಕಾರಿಗಳು ಇಂತಿದ್ದಾರೆ.
- ಮೂಡಬಿದ್ರೆ, ಮಂಗಳೂರು ನಗರ ಉತ್ತರ ಹಾಗೂ ಮಂಗಳೂರು ವಿಧಾನಸಭಾ ಕ್ಷೇತ್ರ: ತಹಶೀಲ್ದಾರ್ ಟಿ.ಜಿ. ಗುರುಪ್ರಸಾದ್ (ಮೊ-9845285151)
- ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರ: ಮಂಗಳೂರು ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ವಿಜಯ ಕುಮಾರ್ (ಮೊ-94481 77302).
- ಬಂಟ್ವಾಳ ವಿಧಾನಸಭಾ ಕ್ಷೇತ್ರ: ತಹಶೀಲ್ದಾರ್ ರಶ್ಮೀ (ಮೊ-99720 61514).
ಮತದಾರರ ಪಟ್ಟಿ ಸೇರ್ಪಣೆಗೆ ಅಗತ್ಯದಾಖಲೆಗಳು ಇಂತಿವೆ:
ದಿನಾಂಕ:01-01-2022ರ ಅರ್ಹತಾ ದಿನಾಂಕದಂತೆ 18 ವರ್ಷವಾಗಿರಬೇಕು, ವಯಸ್ಸಿನ ದಾಖಲೆಗಳು, ಶಾಲಾ ಪ್ರಮಾಣ ಪತ್ರ, ಜನನ ಪ್ರಮಾಣ ಪತ್ರ, ಆಧಾರ್ ಕಾರ್ಡ್, ಪಾಸ್‍ಪೋರ್ಟ್, ಎಸ್‍ಎಸ್‍ಎಲ್‍ಸಿ ಅಥವಾ ಪಿಯುಸಿ ಅಂಕಪಟ್ಟಿ, ಪಾನ್‍ಕಾರ್ಡ್ ಇತ್ಯಾದಿ.
ವಾಸಸ್ಥಳದ ಬಗ್ಗೆ ದಾಖಲೆಗಳು ಪಡಿತರ ಚೀಟಿ, ಗ್ಯಾಸ್ ಸಿಲಿಂಡರ್ ಸ್ವೀಕೃತಿ ರಶೀದಿ, ವಿದ್ಯುತ್ ಬಿಲ್, ಬ್ಯಾಂಕ್ ಪಾಸ್ ಪುಸ್ತಕದ ಪ್ರತಿ, ಪಾಸ್‍ಪೋರ್ಟ್ ವಾಹನ ಚಾಲನ ಪರವಾನಗಿ ಪ್ರತಿ, ಬಾಡಿಗೆ ಕರಾರು ಪತ್ರ ಇತ್ಯಾದಿ ಹಾಗೂ ಪಾಸ್‍ಪೋರ್ಟ್ ಅಳತೆಯ ಎರಡು ಭಾವಚಿತ್ರಗಳು.
ಅರ್ಜಿ ನಮೂನೆಗಳ ವಿವರ:
- 18 ವರ್ಷ ಪೂರೈಸಿದ ಹೊಸ ಮತದಾರರು, ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು ನಮೂನೆ-6,
- ಅನಿವಾಸಿ ಭಾರತೀಯರು ಮತದಾರರ ಪಟ್ಟಿಗೆ ತಮ್ಮ ಹೆಸರು ಸೇರ್ಪಡೆ ಮಾಡಲು ನಮೂನೆ 6ಎ,
- ಮತದಾರರ ಪಟ್ಟಿಯಿಂದ ಹೆಸರು ತೆಗೆದು ಹಾಕಲು ನಮೂನೆ-7,
- ಮತದಾರರ ಪಟ್ಟಿಯಲ್ಲಿರುವ ದೋಷಗಳನ್ನು (ಹೆಸರು, ತಂದೆಯ ಹೆಸರು, ವಿಳಾಸ, ವಯಸ್ಸು, ಲಿಂಗ) ತಿದ್ದುಪಡಿ ಮಾಡಲು ನಮೂನೆ-8
- ಒಂದೇ ವಿಧಾನಸಭಾ ಕ್ಷೇತ್ರದೊಳಗೆ ವಾಸಸ್ಥಳ ಬದಲಾಯಿಸಿದ ಸಂದರ್ಭದಲ್ಲಿ ಸಲ್ಲಿಸಬೇಕಿರುವ ಅರ್ಜಿ ನಮೂನೆ 8-ಎ.
ಲೋಪದೋಷಗಳ ಪರಿಶೀಲನೆಗೆ:
ಮತದಾರರ ನೋಂದಣಾಧಿಕಾರಿ ಹಾಗೂ ಸಹಾಯಕ ಮತದಾರರ ನೋಂದಣಾಧಿಕಾರಿ ಕಚೇರಿಗೆ ಭೇಟಿ ನೀಡಿ ಪರಿಶೀಲಿಸಬಹುದು. ತಮ್ಮ ವ್ಯಾಪ್ತಿಯ ಮತಗಟ್ಟೆ ಅಧಿಕಾರಿಗಳಲ್ಲಿ ಪರಿಶೀಲಿಸಬಹುದು. ವೆಬ್ ಪೋರ್ಟಲ್: www.ceokarnataka.kar.nic.in, www.nvsp.in ಮತ್ತು www.dk.nic.in ನಲ್ಲಿ ವಿವರಗಳನ್ನು ಪರಿಶೀಲಿಸಬಹುದು ಹಾಗೂ ಮತದಾರರ ಸಹಾಯವಾಣಿ 1950 ಸಂಖ್ಯೆಗೆ ಕರೆಮಾಡಿ ಮಾಹಿತಿ ಪಡೆಯಬಹುದು ಎಂದು ದಕ್ಷಿಣ ಕನ್ನಡ ಜಿಲ್ಲೆಯ ಅಪರ ಜಿಲ್ಲಾಧಿಕಾರಿಯವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.