ಉಡುಪಿ: ಕೈಗಾರಿಕಾ ಅದಾಲತ್

 ಉಡುಪಿ: ಕೈಗಾರಿಕಾ ಅದಾಲತ್
Share this post

ಉಡುಪಿ, ಆಗಸ್ಟ್ 26, 2021: ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ವತಿಯಿಂದ ಜಿಲ್ಲೆಯಲ್ಲಿರುವ ಕೈಗಾರಿಕೆಗಳ ಸಮಸ್ಯೆಗಳ
ಕುರಿತು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವರ ಅಧ್ಯಕ್ಷತೆಯಲ್ಲಿ ಸೆಪ್ಟೆಂಬರ್ ತಿಂಗಳ ಮೊದಲ ವಾರದಲ್ಲಿ ಮೈಸೂರು
ವಿಭಾಗ ಮಟ್ಟದ ಕೈಗಾರಿಕಾ ಅದಾಲತ್ ನಡೆಯಲಿದೆ.

ಉಡುಪಿ ಜಿಲ್ಲೆಯ ಉದ್ದಿಮೆದಾರರಿಂದ ಕೈಗಾರಿಕೆಗಳಿಗೆ ಸಂಬಂಧಿಸಿದ ಸಮಸ್ಯೆಗಳಿದ್ದಲ್ಲಿ ತಮ್ಮ ಅಹವಾಲುಗಳನ್ನು
ಸಲ್ಲಿಸುವವರು ಜಂಟಿ ನಿರ್ದೇಶಕರ ಕಛೇರಿ, ಜಿಲ್ಲಾ ಕೈಗಾರಿಕಾ ಕೇಂದ್ರ, ಶಿವಳ್ಳಿ ಕೈಗಾರಿಕಾ ಪ್ರದೇಶ, ಮಣಿಪಾಲ, ಉಡುಪಿ ಇಲ್ಲಿ
ನಿಗದಿತ ನಮೂನೆಯನ್ನು ಪಡೆದು ಭರ್ತಿ ಮಾಡಿದ ಅರ್ಜಿಯನ್ನು ಅಗಸ್ಟ್ 31 ರೊಳಗಾಗಿ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ಕಚೇರಿಯ ದೂರವಾಣಿ ಸಂಖ್ಯೆ: 0820-2575655 ಹಾಗೂ ಮೊಬೈಲ್ ಸಂಖ್ಯೆ: 9448409488
ಅನ್ನು ಸಂಪರ್ಕಿಸಬಹುದು ಎಂದು ಜಂಟಿ ನಿರ್ದೇಶಕರು, ಜಿಲ್ಲಾ ಕೈಗಾರಿಕಾ ಕೇಂದ್ರ, ಉಡುಪಿ ಇವರ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!