ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿ ಆಹ್ವಾನ
ಉಡುಪಿ, ಆಗಸ್ಟ್ 28, 2021: ಜಿಲ್ಲೆಯ ವ್ಯಾಪ್ತಿಯಲ್ಲಿ ಬಾಲಕಾರ್ಮಿಕ ಮತ್ತು ಕಿಶೊರ ಕಾರ್ಮಿಕರನ್ನು ಸಮೀಕ್ಷೆ ಮೂಲಕ ಗುರುತಿಸಲು ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹ ಸರ್ಕಾರೇತರ ಸಂಘ ಸಂಸ್ಥೆಗಳು ನಿಗದಿತ ದಾಖಲೆಗಳೊಂದಿಗೆ ಸೆಪ್ಟೆಂಬರ್ 7 ರೊಳಗೆ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು, ಜಿಲ್ಲಾ ಬಾಲಕಾರ್ಮಿಕ ಯೋಜನಾ ಸಂಘ, ಕಾರ್ಮಿಕ ಅಧಿಕಾರಿಗಳ ಕಚೇರಿ, ಕೊಠಡಿ ಸಂಖ್ಯೆ : ಎ-201, ಎ ಬ್ಲಾಕ್ ಜಿಲ್ಲಾಧಿಕಾರಿಗಳ ಕಚೇರಿ ಸಂಕೀರ್ಣ ರಜತಾದ್ರಿ ಮಣಿಪಾಲ ಸಂಪರ್ಕಿಸಬಹುದು.
ಅರ್ಜಿ ಸಲ್ಲಿಕೆ ಕುರಿತು ಅರ್ಹತೆಗಳ ಮತ್ತಿತರ ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 0820-2574977 ಅಥವಾ ಮೊಬೈಲ್ ಸಂಖ್ಯೆ: 85531 41512 ಗೆ ಸಂಪರ್ಕಿಸುವಂತೆ ಜಿಲ್ಲಾ ಕಾರ್ಮಿಕ ಅಧಿಕಾರಿಗಳು ಹಾಗೂ ಸದಸ್ಯ ಕಾರ್ಯದರ್ಶಿಗಳು ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ಅವರ ಪ್ರಕಟಣೆ ತಿಳಿಸಿದೆ.