ಪಡಿತರ ಚೀಟಿದಾರರ ಇ-ಕೆವೈಸಿಗೆ ಅಂತಿಮ ಅವಕಾಶ

 ಪಡಿತರ ಚೀಟಿದಾರರ ಇ-ಕೆವೈಸಿಗೆ ಅಂತಿಮ ಅವಕಾಶ
Share this post

ಮಂಗಳೂರು ಆ.31, 2021: ಸೆಪ್ಟಂಬರ್ 1 ರಿಂದ 10 ವರೆಗೆ ಜಿಲ್ಲೆಯ ನ್ಯಾಯಬೆಲೆ ಅಂಗಡಿಗಳಲ್ಲಿ ಬಾಕಿ ಉಳಿದಿರುವ ಫಲಾನುಭವಿಗಳ ಇ-ಕೆವೈಸಿ ನಡೆಸಲಾಗುತ್ತಿದೆ.

2021ರ ಸೆಪ್ಟಂಬರ್ ಮಾಹೆಯಲ್ಲಿ ಇ-ಕೆವೈಸಿ ಮಾಡಲು ಕೊನೆಯ ಅವಕಾಶವಾಗಿದ್ದು, ನಂತರ ಇ-ಕೆವೈಸಿ ಮಾಡದ ಪಡಿತರ ಚೀಟಿದಾರರ ಪಡಿತರ ತಡೆಹಿಡಿಯಲಾಗುವುದು.

ಪಡಿತರ ಚೀಟಿದಾರರು ತಮ್ಮ ಕುಟುಂಬದ ಎಲ್ಲಾ ಸದಸ್ಯರ ಇ-ಕೆವೈಸಿ ನೀಡಬೇಕಾಗಿದ್ದು, ಜಿಲ್ಲೆಯಲ್ಲಿ  ಚಾಲ್ತಿ ಇರುವ ಅಂತ್ಯೋದಯ ಹಾಗೂ ಆದ್ಯತಾ ಪಡಿತರ ಚೀಟಿಗಳ ಇ-ಕೆವೈಸಿ ನೀಡಲು ಆಧಾರ್ ಕಾರ್ಡ್, ಎಲ್.ಪಿ.ಜಿ ದಾಖಲೆ, ಜಾತಿ ಪ್ರಮಾಣ ಪತ್ರ(ಇದ್ದಲ್ಲಿ), ಆದಾಯ ಪ್ರಮಾಣ ಪತ್ರ, ಎಂಡೋಸಲ್ಫಾನ್ ಪೀಡಿತರಂತಹ ವಿಶೇಷ ವರ್ಗದವರು ಹೊಂದಿರುವ ಧೃಢಪತ್ರಗಳಿದ್ದಲ್ಲಿ ಅವುಗಳೊಂದಿಗೆ ತಮಗೆ ಸಂಬಂಧಪಟ್ಟ ನ್ಯಾಯಬೆಲೆ ಅಂಗಡಿಗೆ ತೆರಳಿ ಇ-ಕೆವೈಸಿ ಮಾಡಿಸಬೇಕು.

2020ರ ಫೆಬ್ರವರಿ ನಂತರ ವಿತರಿಸಿರುವ ಹೊಸ ಹಾಗೂ ತಿದ್ದುಪಡಿ ಮಾಡಲಾದ ಪಡಿತರ ಚೀಟಿಗಳನ್ನು ಬಿಟ್ಟು ಮೊದಲ ಹಂತದಲ್ಲಿ ಇ-ಕೆವೈಸಿ ಮಾಡದಿರುವ ಅಂತ್ಯೋದಯ, ಆದ್ಯತಾ(ಬಿಪಿಎಲ್) ಹಾಗೂ ಆದ್ಯತೇತರ ಪಡಿತರ ಚೀಟಿಗಳಿಗೆ ಇ-ಕೆವೈಸಿ ಕಡ್ಡಾಯವಾಗಿ ಮಾಡಲೇ ಬೇಕಾಗಿದ್ದು ಇ-ಕೆವೈಸಿ ನೀಡಲು ಯಾವುದೇ ಶುಲ್ಕವಿರುವುದಿಲ್ಲ. ಇದನ್ನು ಉಚಿತವಾಗಿ ಮಾಡಲಾಗುತ್ತಿದ್ದು, ಜಿಲ್ಲೆಯ ಎಲ್ಲಾ ಪಡಿತರ ಚೀಟಿದಾರರು ಸಹರಿಸಬೇಕಿದೆ.

ಇ-ಕೆವೈಸಿ ಸಂಗ್ರಹಣೆಗೆ ಯಾರಾದರೂ ಹಣ ಕೇಳಿದಲ್ಲಿ ಅಥವಾ ಏನಾದರೂ ದೂರುಗಳಿದ್ದರೆ ಅಥವಾ ಹೆಚ್ಚಿನ ಮಾಹಿತಿಗೆ ಸಂಬಂಧಪಟ್ಟ ತಾಲೂಕುಗಳ ತಹಶೀಲ್ದಾರರು ಮತ್ತು ಮಂಗಳೂರಿನ ಅನೌಪಚಾರಿಕ ಪಡಿತರ ಪ್ರದೇಶದ ಸಹಾಯಕ ನಿರ್ದೇಶಕರ ಕಚೇರಿಯನ್ನು ಸಂಪರ್ಕಿಸುವಂತೆ ಜಿಲ್ಲಾಧಿಕಾರಿಯವರ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!