ಕಂದು ರೋಗ: ಹೆಣ್ಣುಕರುಗಳಿಗೆ ಲಸಿಕಾ ಕಾರ್ಯಕ್ರಮ

 ಕಂದು ರೋಗ: ಹೆಣ್ಣುಕರುಗಳಿಗೆ ಲಸಿಕಾ ಕಾರ್ಯಕ್ರಮ
Share this post

ಮಂಗಳೂರು ಸೆ.4, 2021: ರಾಷ್ಟ್ರೀಯ ಕಂದು ರೋಗ ನಿಯಂತ್ರಣ ಕಾರ್ಯಕ್ರಮದಡಿ 2021-22ನೇ ಸಾಲಿನ ಮೊದಲ ಹಂತದ ಕಾರ್ಯಕ್ರಮವನ್ನು ಜಿಲ್ಲೆಯಲ್ಲಿ ಹಮ್ಮಿಕೊಳ್ಳಲಾಗಿದೆ.

ಸೆಪ್ಟೆಂಬರ್ 6 ರಿಂದ ಸೆಪ್ಟೆಂಬರ್ 15 ರವರೆಗೆ ಜಿಲ್ಲೆಯಾದ್ಯಂತ ಹಸು ಮತ್ತು ಎಮ್ಮೆಗಳ ಹೆಣ್ಣುಕರುಗಳಿಗೆ ಮಾತ್ರ ಉಚಿತವಾಗಿ ಕಂದು ರೋಗ (ಬ್ರುಸೆಲ್ಲೋಸಿಸ್) ವಿರುದ್ಧ ಲಸಿಕೆ ನೀಡಲಾಗುತ್ತದೆ. ಲಸಿಕೆಯನ್ನು ಕರುಗಳಿಗೆ ಜೀವಿತಾವಧಿಯಲ್ಲಿ ಒಂದು ಬಾರಿ ಮಾತ್ರ ನೀಡಬೇಕಾಗಿದೆ.

ರೈತರು ಸ್ಥಳೀಯ ಪಶುವೈದ್ಯಕೀಯ ಸಂಸ್ಥೆಗಳನ್ನು ಸಂಪರ್ಕಿಸುವ ಜೊತೆಗೆ 4 ರಿಂದ 8 ತಿಂಗಳ ವಯಸ್ಸಿನ ಹೆಣ್ಣುಕರುಗಳಿಗೆ ತಪ್ಪದೇ ಲಸಿಕೆ ಹಾಕಿಸುವಂತೆ ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.            

Subscribe to our newsletter!

Other related posts

error: Content is protected !!