ಸೆ.8 ರಂದು ಲಕ್ಷ ಲಸಿಕಾ ಮೇಳ
ಮಂಗಳೂರು ಸೆ.6, 2021: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಸೆ.8 ರಂದು ಲಕ್ಷ ಲಸಿಕಾ ಮೇಳ ಆಯೋಜಿಸಲಾಗಿದೆ. ಜಿಲ್ಲೆಯ 430 ಉಪಕೇಂದ್ರಗಳಲ್ಲಿ ಅದಕ್ಕಾಗಿ ಸೂಕ್ತ ವ್ಯವಸ್ಥೆ ಮಾಡಲಾಗಿದ್ದು, ಇರುವ ಸಿಬ್ಬಂದಿಗಳೊಂದಿಗೆ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪ್ರತಿ ಕೇಂದ್ರದಲ್ಲಿ ಇಬ್ಬರು ಡೇಟಾ ಎಂಟ್ರಿ ಆಪರೇಟರ್ ಸೇರಿದಂತೆ ಅಗತ್ಯವಿರುವ ಸಿಬ್ಬಂದಿಗಳನ್ನು ಈ ಕಾರ್ಯಕ್ಕೆ ನೇಮಿಸಲಾಗಿದೆ. 18 ವರ್ಷ ಮೇಲ್ಪಟ್ಟವರು ಮೊದಲ ಅಥವಾ ಎರಡನೇ ಡೋಸ್ ಲಸಿಕೆಯನ್ನು ಈ ಲಸಿಕಾ ಮೇಳದಲ್ಲಿ ಪಡೆಯಬಹುದಾಗಿದೆ. ಉದ್ಯೋಗಸ್ಥರ ಅನುಕೂಲಕ್ಕಾಗಿ ಬೆಳಿಗ್ಗೆಯಿಂದ ರಾತ್ರಿಯ ವರೆಗೆ ಲಸಿಕೆಯನ್ನು ಪಡೆಯಲು ಅವಕಾಶ ಕಲ್ಪಿಸಲಾಗಿದೆ. ಜಿಲ್ಲೆಯ ನಾಗರೀಕರು ಇದರ ಸದುಪಯೋಗ ಪಡೆಯುವಂತೆ ಜಿಲ್ಲಾಧಿಕಾರಿಗಳು ಕರೆ ನೀಡಿದ್ದಾರೆ.
18 ವರ್ಷ ಮೇಲ್ಪಟ್ಟ ಎಲ್ಲಾ ಲಸಿಕಾ ಫಲಾನುಭವಿಗಳು ಹಾಗೂ ಗರ್ಣಿಣಿಯರಿಗೂ ಕೂಡಾ ಲಸಿಕೆಯನ್ನು ನೀಡಲಾಗುವುದು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.