ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ

 ಶೀಘ್ರಲಿಪಿಗಾರ ಹುದ್ದೆಗೆ ಅರ್ಜಿ ಆಹ್ವಾನ
Share this post

ಉಡುಪಿ, ಸೆ 9, 2021: ಜಿಲ್ಲಾ ಮತ್ತು ಸತ್ರ ನ್ಯಾಯಲಯದ ಘಟಕದಲ್ಲಿ ಖಾಲಿ ಇರುವ 8 ಶೀಘ್ರ ಲಿಪಿಗಾರ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಹಾಗೂ ಹಿರಿಯ ದರ್ಜೆಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಮತ್ತು ಬೆರಳಚ್ಚು ಪರೀಕ್ಷೆಯಲ್ಲಿ ತೇರ್ಗಡೆ ಹೊಂದಿರುವ ಅಥವಾ ಸೆಕ್ರೆಟೇರಿಯಲ್ ಪ್ರಾಕ್ಟೀಸ್ ಪಠ್ಯಕ್ರಮದ ಡಿಪ್ಲೋಮಾ ಪದವಿಯೊಂದಿಗೆ ಕನ್ನಡ ಮತ್ತು ಆಂಗ್ಲ ಭಾಷೆಗಳ ಶೀಘ್ರ ಲಿಪಿ ಹಾಗೂ ಬೆರಳಚ್ಚು ವಿಷಯಗಳಲ್ಲಿ ಐಚ್ಚಿಕ ವಿಷಯಗಳನ್ನು ಹೊಂದಿ ತೇರ್ಗಡೆ ಹೊಂದಿರುವವರು ಅರ್ಜಿ ಸಲ್ಲಿಸ ಬಹುದಾಗಿದೆ.

ಅರ್ಜಿ ಸಲ್ಲಿಸಲು ಸೆಪ್ಟೆಂಬರ್ 30 ಕೊನೆಯ ದಿನ, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ  ಉಡುಪಿ ಜಿಲ್ಲಾ ನ್ಯಾಯಲಯದ ವೆಬ್‌ಸೈಟ್ https://districts.ecourt.gov.in/udupi-onlinerecruitment ನ್ನು ಸಂಪರ್ಕಿಸುವಂತೆ ಜಿಲ್ಲಾ ಮತ್ತು ಸತ್ರ ನ್ಯಾಯಧೀಶರ ಕಛೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!