ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನ
ಕಾರವಾರ ಸೆ. 15, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22 ನೇ ಸಾಲಿನ ಕಾನೂನು ಪದವೀಧರರಿಗೆ 4 ವರ್ಷಗಳ ತರಬೇತಿ ಭತ್ಯೆ ಪಡೆಯಲು ಹಿಂದುಳಿದ ವರ್ಗಗಳ ಕಾನೂನು ಪದವೀಧರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅಭ್ಯರ್ಥಿಗಳು ಕಾನೂನು ಪದವಿ ಪೂರೈಸಿದ ಹಿಂದುಳಿದ ವರ್ಗಕ್ಕೆ ಸೇರಿದ ರಾಜ್ಯದ ನಿವಾಸಿಗಳಾಗಿರಬೇಕು. ಪ್ರವರ್ಗ – 1, 2ಎ, 3ಎ ಮತ್ತು 3ಬಿ, ( 3 ಬಿ ಯಲ್ಲಿ ಕಿಶ್ವಿನ್ ಮತ್ತು ಜೈನರುಗಳನ್ನು ಹೊರತುಪಡಿಸಿ) ಪ್ರವರ್ಗ-1 ಕ್ಕೆ ಸೇರಿದ ಅಭ್ಯರ್ಥಿಗಳಿಗೆ ವಯೋಮಿತಿ 40 ವರ್ಷಗಳು, ಇತರೇ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ 38 ವರ್ಷಗಳು ಮೀರಿರಬಾರದು.
ಅಭ್ಯರ್ಥಿಗಳ ಪಾಲಕರ, ಪೆÇೀಷಕರ ವಾರ್ಷಿಕ ಆದಾಯ ಮಿತಿ ಪ್ರವರ್ಗ-1 ಕ್ಕೆ ರೂ. 3.50 ಲಕ್ಷ, ಪ್ರವರ್ಗ 2ಎ, 3ಎ ಮತ್ತು 3ಬಿ ಗೆ ರೂ. 2.50 ಲಕ್ಷ ಮೀರಬಾರದು. ಅಭ್ಯರ್ಥಿಗಳು ಕಡ್ಡಾಯವಾಗಿ ಸ್ಟೇಟ್ ಬಾರ್ ಕೌನ್ಸಿಲ್‍ನಲ್ಲಿ ಹೆಸರನ್ನು ನೋಂದಾಯಿಸಿಕೊಂಡಿರಬೇಕು. ತರಬೇತಿ ಅವಧಿಯು ನಾಲ್ಕು ವರ್ಷಗಳಾಗಿದ್ದು ಈ ಅವಧಿಯಲ್ಲಿ ತಿಂಗಳಿಗೆ 4 ಸಾವಿರ ತರಬೇತಿ ಭತ್ಯೆ ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳನ್ನು ಜಿಲ್ಲೆಯ ಜಿಲ್ಲಾ ಪಬ್ಲಿಕ್ ಪ್ರೋಸಿಕ್ಯೂಟರ್, ಸರಕಾರಿ ವಕೀಲರು ಅಥವಾ ಹಿರಿಯ ವಕೀಲರ ಹತ್ತಿರ ತರಬೇತಿಗೆ ನಿಯೋಜಿಸಲಾಗುತ್ತದೆ.
ಜಿಲ್ಲೆಯಿಂದ ಹತ್ತು ಅಭ್ಯರ್ಥಿಗಳನ್ನು ಮಾತ್ರ ಆಯ್ಕೆ ಮಾಡಲಾಗುತ್ತಿದ್ದು, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ನಿಗದಿತ ಅರ್ಜಿ ನಮೂನೆಗಳನ್ನು ಪಡೆದು ಅಕ್ಟೋಬರ್ 12 ಒಳಗಾಗಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಅರ್ಜಿ ಸಲ್ಲಿಸಬೇಕಾಗಿದ್ದು, ಅಪೂರ್ಣ ಹಾಗೂ ಅವಧಿ ಮೀರಿ ಬಂದ ಅರ್ಜಿಗಳನ್ನು ಯಾವುದೇ ಕಾರಣ ನೀಡದೇ ತಿರಸ್ಕರಿಸಲಾಗುವುದು. ಜಿಲ್ಲೆಯ ಹಿಂದುಳಿದ ವರ್ಗಕ್ಕೆ ಸೇರಿದ ಕಾನೂನು ಪದವಿ ಪೂರೈಸಿದವರು ಈ ಸೌಲಭ್ಯದ ಪ್ರಯೋಜನ ಪಡೆಯಬೇಕು ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ವೀರೇಂದ್ರ ಎನ್. ಬಾಡಕರ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.