ಗಡಿ ಭಾಗದ ಮದ್ಯದಂಗಡಿಗಳ ಮೇಲಿನ ಕೆಲವು ನಿರ್ಬಂಧಗಳು ತೆರವು

 ಗಡಿ ಭಾಗದ ಮದ್ಯದಂಗಡಿಗಳ ಮೇಲಿನ ಕೆಲವು ನಿರ್ಬಂಧಗಳು ತೆರವು
Share this post

ಮಂಗಳೂರು ಸೆ.19, 2021: ಪ್ರಸ್ತುತ ಜಿಲ್ಲೆಯಲ್ಲಿ ಕೋವಿಡ್ ಸೋಂಕಿನ ಪ್ರಮಾಣ ಕಡಿಮೆಯಾಗುತ್ತಿರುವ ಕಾರಣ ಕೇರಳದ ಗಡಿಭಾಗಕ್ಕೆ ಹೊಂದಿಕೊಂಡಿರುವ ಜಿಲ್ಲೆಯ ಮಂಗಳೂರು, ಬಂಟ್ವಾಳ, ಪುತ್ತೂರು, ಸುಳ್ಯ ತಾಲೂಕು ಪ್ರದೇಶಗಳ 5 ಕಿ.ಮೀ. ವ್ಯಾಪ್ತಿಯಲ್ಲಿಲರುವ 19ಗ್ರಾಮಗಳ ಮದ್ಯದಂಗಡಿಗಳಿಗೆ ಇದೇ ಸೆ.21ರಿಂದ ಮುಂದಿನ ಆದೇಶದ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 6 ಗಂಟೆಯ ವರಗೆ ಕೆಲವು ಷರತ್ತುಗಳನ್ನು ಕಡ್ಡಾಯವಾಗಿ ಪಾಲಿಸಿ ವ್ಯವಹಾರ ನಡೆಸಲು ಜಿಲ್ಲಾಧಿಕಾರಿಯವರು ಆದೇಶ ಹೊರಡಿಸಿದ್ದಾರೆ.

ಷರತ್ತುಗಳು ಇವು:

1. ಮದ್ಯ ಮಾರಾಟ ಮಳಿಗೆಯಲ್ಲಿನ ನೌಕರರು ಹಾಗೂ ಮದ್ಯ ಖರೀದಿಗೆ ಬರುವ ಗ್ರಾಹಕರುಗಳು ಕಡ್ಡಾಯವಾಗಿ ಮಾಸ್ಕ್ ಧರಿಸುವುದು ಹಾಗೂ ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು.
2. ಸನ್ನದು ಸ್ಥಳದಲ್ಲಿ ಸ್ಯಾನಿಟೈಸರ್ ಇಡಲು ವ್ಯವಸ್ಥೆ ಮಾಡುವುದರೊಂದಿಗೆ ಗ್ರಾಹಕರು ಕಡ್ಡಾಯವಾಗಿ ಸ್ಯಾನಿಟೈಸರ್ ಬಳಸುವಂತೆ ನೋಡಿಕೊಳ್ಳುವುದು ಹಾಗೂ ಈ ಬಗ್ಗೆ ಸೂಚನಾ ಫಲಕಗಳನ್ನು ಅಳವಡಿಸಲು ಕ್ರಮ ಕೈಗೊಳ್ಳುವುದು.
3. ಸನ್ನದು ಮಳಿಗೆಗಳಲ್ಲಿ ಮಳಿಗೆಯ ಅಸುಪಾಸುಗಳಲ್ಲಿ ಸಾರ್ವಜನಿಕರುಗಳು ಗುಂಪುಗೂಡದಂತೆ ಕ್ರಮ ವಹಿಸುವುದು.
4. ಕೇರಳ ರಾಜ್ಯದ ಗಡಿಭಾಗಗಳಿಂದ ಖಖಿPಅಖ ವರದಿಯಿಲ್ಲದೇ ಸಕಾರಣವಿಲ್ಲದೇ ಅಕ್ರಮವಾಗಿ ಕೇರಳ ರಾಜ್ಯದ ವಾಸಿಗಳು ದಕ್ಷಿಣ ಕನ್ನಡ ಜಿಲ್ಲೆಯನ್ನು ಪ್ರವೇಶಿಸಿ, ಬಾರು/ಮದ್ಯ ಮಾರಾಟ ಮಳಿಗೆಗಳಲ್ಲಿ ಮದ್ಯ ಸೇವಿಸುವುದು ಕಂಡುಬಂದಲ್ಲಿ ಅಂತಹವರ ವಿರುದ್ಧ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಜಿಲ್ಲಾ ದಂಡಾಧಿಕಾರಿಗಳು, ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ.ವಿ. ರಾಜೇಂದ್ರ ಅವರು ಆದೇಶ ಹೊರಡಿಸಿದ್ದಾರೆ.

Subscribe to our newsletter!

Other related posts

error: Content is protected !!