ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಅರ್ಜಿ ಆಹ್ವಾನ
ಉಡುಪಿ, ಸೆ 29, 2021: ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ವರ್ಗದ ಕಲ್ಯಾಣ ನಿರ್ದೇಶನಾಲಯದಿಂದ ಜಿಲ್ಲೆಯ ಪ್ರತಿಷ್ಠಿತ ಶಾಲೆಗಳಲ್ಲಿ ಅಧ್ಯಯನ ಮಾಡಲು ಪ.ವರ್ಗದ ವಿದ್ಯಾರ್ಥಿಗಳಿಗೆ ಪ್ರವೇಶಾವಕಾಶ ಒದಗಿಸಲಾಗಿದ್ದು, 6ನೇ ತರಗತಿ ಸೇರ್ಪಡೆಗೆ ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸುವವರು 2020-21ನೇ ಸಾಲಿನಲ್ಲಿ 5ನೇ ತರಗತಿಯಲ್ಲಿ 60% ಅಂಕ ಪಡೆದು ಉತ್ತೀರ್ಣರಾಗಿರಬೇಕು ಹಾಗೂ ಕುಟುಂಬದ ವಾರ್ಷಿಕ ಆದಾಯ 2 ಲಕ್ಷ ಮೀರಿರಬಾರದು.
ಅರ್ಜಿ ಸಲ್ಲಿಸಲು ಅಕ್ಟೋಬರ್ 11 ಕೊನೆ ದಿನವಾಗಿದ್ದು, ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಯೋಜನಾ ಸಮನ್ವಯಾಧಿಕಾರಿಗಳ ಕಛೇರಿ, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆ ರಜತಾದ್ರಿ ಮಣಿಪಾಲ ದೂರವಾಣಿ ಸಂಖ್ಯೆ: 0820-2574814/2950198 ನ್ನು ಸಂರ್ಪಕಿಸಬಹುದು ಎಂದು ಸಮಗ್ರ ಗಿರಿಜನ ಅಭಿವೃದ್ಧಿ ಯೋಜನಾ ಸಮನ್ವಯಾಧಿಕಾರಿಗಳ ಪ್ರಕಟಣೆ ತಿಳಿಸಿದೆ.