ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ
ಕಾರವಾರ ಸೆ.30, 2021: ರೇಷ್ಮೆ ಇಲಾಖೆಯಿಂದ 2020-21 ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಉತ್ತಮ ಪ್ರಗತಿ ಸಾಧಿಸಿರುವ ಬೆಳೆಗಾರರಿಂದ ಅರ್ಜಿಗಳನ್ನು ಆಹ್ವಾನಿಸಿದೆ.
ಅರ್ಜಿ ಸಲ್ಲಿಸಲು ಅಕ್ಟೋಬರ್ 5 ಕೊನೆಯ ದಿನ.
ಅರ್ಜಿ ಸಲ್ಲಿಸಬಯಸುವ ರೇಷ್ಮೆ ಬೆಳೆಗಾರರು:
- ಕನಿಷ್ಟ 1 ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕಾ ಮನೆ ಹೊಂದಿರಬೇಕು.
- 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65 ಕೆ.ಜಿ ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆಜಿಗಿಂತ ಕಡಿಮೆ ಇರಬಾರದು.
- ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ, ಜಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಕುರಿತು ದಾಖಲಾತಿಗಳನ್ನು ಹೊಂದಿರಬೇಕು.
ಆಸಕ್ತ ಬೆಳೆಗಾರರು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾಗಳ ಕಛೇರಿಯನ್ನು ಸಂಪರ್ಕಿಸಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಶಿರಸಿಯ ರೇಷ್ಮೆ ಉಪ ನಿರ್ದೇಶಕರ ಕಾರ್ಯಲಯವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.