ಮಂಗಳೂರು:ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ

 ಮಂಗಳೂರು:ಬದಲಿ ಮಾರ್ಗದಲ್ಲಿ ಸಂಚರಿಸಲು ಸೂಚನೆ
Share this post

ಮಂಗಳೂರು, ಅ 07, 2021: ದೇಶದ ರಾಷ್ಟ್ರಪತಿಗಳಾದ ರಾಮ್ ನಾಥ್ ಕೋವಿಂದ್ ಮಂಗಳೂರಿಗೆ ಆಗಮಿಸಲಿದ್ದು, ಸಕ್ರ್ಯೂಟ್ ಹೌಸ್‍ನಲ್ಲಿ ವಾಸ್ತವ್ಯ ಹೂಡುವ ಕಾರಣ ಅವರ ಭದ್ರತೆ ಮತ್ತು ಸುರಕ್ಷತೆಯ ದೃಷ್ಟಿಯಿಂದ ಸಂಚಾರ ವ್ಯವಸ್ಥೆಯಲ್ಲಿ ಬದಲಾವಣೆ ಮಾಡಲಾಗಿದೆ.

ಸಕ್ರ್ಯೂಟ್ ಹೌಸ್ ಸುತ್ತಮುತ್ತಲಿನ ರಸ್ತೆಗಳಲ್ಲಿ ಆಗಸ್ಟ್ 7ರ ಸಂಜೆ 6 ಗಂಟೆಯಿಂದ ಅ. 8 ರ ಬೆಳಿಗ್ಗೆ 11 ಗಂಟೆಯವರೆಗೆ ರಾಷ್ಟ್ರೀಯ ಹೆದ್ದಾರಿ 66ರ ಕೆ.ಪಿ.ಟಿ ಜಂಕ್ಷನ್‍ನಿಂದ ಸಕ್ರ್ಯೂಟ್ ಹೌಸ್ ಜಂಕ್ಷನ್ ಮುಖಾಂತರ ಬಿಜೈನ ಬಟ್ಟಗುಡ್ಡ ರಸ್ತೆಯಲ್ಲಿ ಸಂಚರಿಸುವ ಎಲ್ಲಾ ತರಹದ ವಾಹನಗಳ ಸಂಚಾರವನ್ನು ನಿಷೇಧಿಸಿ ಈ ಕೆಳಕಂಡ ಮಾರ್ಗದಲ್ಲಿ ಸಂಚರಿಸುವಂತೆ ಮಾರ್ಪಾಡುಗೊಳಿಸಿ ತಾತ್ಕಾಲಿಕವಾಗಿ ಅಧಿಸೂಚನೆ ಹೊರಡಿಸಲಾಗಿದೆ.

ಬದಲಾದ ಮಾರ್ಗ ಇಂತಿದೆ:

ಕೆಪಿಟಿ ಕಡೆಯಿಂದ ಸಕ್ರ್ಯೂಟ್ ಹೌಸ್ ಜಂಕ್ಷನ್-ಬಟ್ಟಗುಡ್ಡ ಮೂಲಕ ನಗರಕ್ಕೆ ಪ್ರವೇಶಿಸುವ ವಾಹನಗಳು ನಂತೂರು ಜಂಕ್ಷನ್ ಮೂಲಕ ನಗರ ಪ್ರವೇಶಿಸಬೇಕು.

ಕೆಎಸ್‍ಆ ಟಿಸಿ, ಬಿಜೈ ಬಟ್ಟಗುಡ್ಡ ಕಡೆಯಿಂದ ಕೆಪಿಟಿ ರಾಷ್ಟ್ರೀಯ ಹೆದ್ದಾರಿ ಕಡೆಗೆ ಸಂಚರಿಸುವ ವಾಹನಗಳು ಕುಂಟಿಕಾನ ಮುಖಾಂತರ ರಾಷ್ಟ್ರೀಯ ಹೆದ್ದಾರಿ ಕಡೆಗೆ ಚಲಾಯಿಸಬೇಕು.

ಬಂಟ್ಸ್ ಹಾಸ್ಟೆಲ್ ಸರ್ಕಲ್, ಕದ್ರಿ ಕಂಬಳ ರಸ್ತೆ, ಬಿಜೈ ಬಟ್ಟಗುಡ್ಡ ಮುಖಾಂತರ ರಾಷ್ಟ್ರೀಯ ಹೆದ್ದಾರಿಯಲ್ಲಿನ ಕೆಪಿಟಿ ಜಂಕ್ಷನ್ ಕಡೆಗೆ ಸಂಚರಿಸುವ ವಾಹನಗಳು ಬಂಟ್ಸ್ ಹಾಸ್ಟೆಲ್ ಸರ್ಕಲ್ ಮಲ್ಲಿಕಟ್ಟೆ ಮೂಲಕ ರಾಷ್ಟ್ರೀಯ ಹೆದ್ದಾರಿಯಲ್ಲಿನ ನಂತೂರು ಜಂಕ್ಷನ್ ಮುಖಾಂತರ ಮುಂದುವರೆಯುವುದು ಎಂದು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!