ಮಂಗಳೂರು: ಸವಿತಾ ಸಮಾಜದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನ

 ಮಂಗಳೂರು: ಸವಿತಾ ಸಮಾಜದ ವಿದ್ಯಾರ್ಥಿಗಳಿಂದ  ಅರ್ಜಿ ಆಹ್ವಾನ
Share this post

ಮಂಗಳೂರು, ಅ 09, 2021: ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ 2021-22ನೇ ಸಾಲಿಗೆ ಸವಿತಾ ಸಮಾಜದ ವಿದ್ಯಾರ್ಥಿಗಳಿಗೆ ಪಾರಂಪರಿಕ ಕಲೆಗಳಾದ ಡೋಲು ಮತ್ತು ನಾದಸ್ವರ ಸಂಗೀತ ಕಲೆಗಳಲ್ಲಿ 4 ವರ್ಷದ ತರಬೇತಿಯನ್ನು ಉಚಿತ ಊಟ, ವಸತಿ, ಶಿಕ್ಷಣ ಮತ್ತು ತರಬೇತಿ ಭತ್ಯೆಯೊಂದಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯಲ್ಲಿ ನೀಡಲಾಗುವುದು.

ಆಸಕ್ತ ವಿದ್ಯಾರ್ಥಿಗಳು ಅರ್ಜಿಯನ್ನು ಆಯಾ ಜಿಲ್ಲೆಯ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಿಂದ ಪಡೆದು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಜಿ ಸಲ್ಲಿಸಲು ಅ.16 ಕೊನೆಯ ದಿನ. ಹೆಚ್ಚಿನ ಮಾಹಿತಿಗೆ ಸಹಾಯವಾಣಿ ಸಂಖ್ಯೆ-8050770004 ಹಾಗೂ https://bcwd.karnataka.gov.in ಸಂಪರ್ಕಿಸುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!