ಕಾರವಾರ: ಅಪ್ರೆಂಟಿಸ್ ತರಬೇತಿಗೆ ಅರ್ಜಿ ಆಹ್ವಾನ
ಕಾರವಾರ, ಅ 12, 2021: ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ ಪತ್ರಿಕೋದ್ಯಮ ಪದವೀಧರರಿಗೆ ಪತ್ರಿಕೋದ್ಯಮ ವೃತ್ತಿಯಲ್ಲಿ ತೊಡಗಿಕೊಳ್ಳಲು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ವತಿಯಿಂದ 10 ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಯನ್ನು ಹಮ್ಮಿಕೊಳ್ಳಲಾಗಿದೆ.
2021-22 ನೇ ಸಾಲಿನಲ್ಲಿಇಲಾಖೆಯ ಜಿಲ್ಲಾ ಕಚೇರಿಗೆ ಪರಿಶಿಷ್ಟ ಜಾತಿಯ ಇಬ್ಬರು ಹಾಗೂ ಪರಿಶಿಷ್ಟ ಪಂಗಡದ ಒಬ್ಬ ಅಭ್ಯರ್ಥಿಗಳನ್ನು ಮುಖ್ಯವಾಗಿ ಮೆರಿಟ್ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಿಕೊಳ್ಳಲಾಗುವುದು. ಆಯ್ಕೆಯಾದ ಪ್ರತಿ ಅಪ್ರೆಂಟಿಸ್ಗೆ ತಿಂಗಳಿಗೆ 15 ಸಾವಿರ ರೂ. ಸ್ಟಾಯಿಫಂಡ್ (ಗೌರವಧನ) ನೀಡಲಾಗುವುದು.
ಅರ್ಜಿ ಸಲ್ಲಿಸಲು ಅ. 29 ಕೊನೆಯ ದಿನವಾಗಿದ್ದು, ಅಭ್ಯರ್ಥಿಯು ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತಕೋತ್ತರ ಪದವಿ ಪಡೆದಿರಬೇಕು. ಕಂಪ್ಯೂಟರ್ ಜ್ಞಾನ ಹೊಂದಿದ್ದು, ಕನ್ನಡ ಭಾಷೆ ಬಳಕೆಯಲ್ಲಿ ಪ್ರಬುದ್ಧತೆ ಹೊಂದಿರುವ 40 ವರ್ಷದೊಳಗಿನವರು ಅರ್ಜಿ ಸಲ್ಲಿಸಬಹುದಾಗಿದೆ.
ಅರ್ಜಿಯೊಂದಿಗೆ ಎಸ್ಎಸ್ಎಲ್ಸಿ ಅಂಕಪಟ್ಟಿ, ಪದವಿ ಪ್ರಮಾಣ ಪತ್ರ, ಸ್ನಾತಕೋತ್ತರ ಪದವಿ ಪ್ರಮಾಣ ಪತ್ರ, ಜಾತಿ ಪ್ರಮಾಣ ಪತ್ರ ಪಾಸ್ಪೋರ್ಟ್ ಅಳತೆಯ 2 ಭಾವಚಿತ್ರ ಹಾಗೂ ಇನ್ನಿತರ ಪೂರಕ ದಾಖಲೆಗಳನ್ನು ದ್ವಿಪ್ರತಿಯಲ್ಲಿ ಸಲ್ಲಿಸುವುದು.
ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗಾಗಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ, ವಾರ್ತಾ ಭವನ ಜಿಲ್ಲಾಧಿಕಾರಿ ಕಚೇರಿ ಹತ್ತಿರ ಕಾರವಾರ-581301, ಅಥವಾ ದೂರವಾಣಿ ಸಂಖ್ಯೆ: 08382-226344ಇ-ಮೇಲ್: karwardipo@gmail. com ಸಂಪರ್ಕಿಸಬಹುದು ಎಂದು ವಾರ್ತಾ ಮತ್ತು ಸಂಪರ್ಕ ಇಲಾಖೆಯು ಪ್ರಕಟಣೆಯಲ್ಲಿ ತಿಳಿಸಿದೆ.