ಕೈಗಾರಿಕಾ ತರಬೇತಿ ಸಂಸ್ಥೆ: ಅರ್ಜಿ ಆಹ್ವಾನ

 ಕೈಗಾರಿಕಾ ತರಬೇತಿ ಸಂಸ್ಥೆ: ಅರ್ಜಿ ಆಹ್ವಾನ
Share this post

ಮಂಗಳೂರು, ಅ 15, 2021: ನಗರದ ಸರಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ ಟಾಟಾ ಟೆಕ್ನಾಲಜೀಸ್ ಲಿಮಿಟೆಡ್ ಸಹಯೋಗದೊಂದಿಗೆ ಎಸ್.ಎಸ್.ಎಲ್.ಸಿ ಉತ್ತೀರ್ಣರಾದವರಿಗೆ ಅತ್ಯಾಧುನಿಕ ಕೋರ್ಸ್‍ಗಳಲ್ಲಿ ತರಬೇತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಅತ್ಯಾಧುನಿಕ ಕೋರ್ಸ್‍ಗಳ ವಿವರ ಇಂತಿವೆ:
ಎಸ್.ಎಸ್.ಎಲ್.ಸಿ. ವಿದ್ಯಾರ್ಹತೆ ಹೊಂದಿದ ಅಭ್ಯರ್ಥಿಗಳು 2 ವರ್ಷದ ಬ್ಯಾಟರಿ ಎಲೆಕ್ಟ್ರಿಕ್ ವೆಹಿಕಲ್ ಕೋರ್ಸ್ ಹಾಗೂ ಒಂದು ವರ್ಷದ ಇಂಡಸ್ಟ್ರಿಯಲ್ ರೋಬೊಟಿಕ್ ಮತ್ತು ಡಿಜಿಟಲ್ ಮ್ಯಾನುಫಾಕ್ಚರಿಂಗ್ ಕೋರ್ಸ್. 20 ರೂ.ಗಳನ್ನು ಪಾವತಿಸಿ, ಅರ್ಜಿ ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಅ. 21 ಕೊನೆಯ ದಿನ.

ಹೆಚ್ಚಿನ ಮಾಹಿತಿಗೆ ಸಂಸ್ಥೆಯನ್ನು ಖುದ್ದಾಗಿ ಅಥವಾ ದೂ.ಸಂ: 0824-2216360/9845226485 ಸಂಪರ್ಕಿಸಬಹುದು ಎಂದು ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!