ಐ.ಎ.ಎಸ್,ಕೆ.ಎ.ಎಸ್ ಪರೀಕ್ಷೆ: ಉಡುಪಿ ಜಿಲ್ಲಾಡಳಿತ ವತಿಯಿಂದ ಉಚಿತ ತರಬೇತಿ
ಉಡುಪಿ, ಅಕ್ಟೋಬರ್ 19, 2021: ಉಡುಪಿ ಜಿಲ್ಲಾಡಳಿತದ ವತಿಯಿಂದ, ಭಾರತೀಯ ನಾಗರೀಕ ಸೇವಾ ಪರೀಕ್ಷೆ ( ಯುಪಿಎಸ್‌ಸಿ) ಮತ್ತು ಕರ್ನಾಟಕ ನಾಗರೀಕ ಸೇವಾ ಪರೀಕ್ಷೆ (ಕೆಪಿಎಸ್‌ಸಿ) ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಇಚ್ಛಿಸುವ ಉಡುಪಿ ಜಿಲ್ಲೆಯ ಅಭ್ಯರ್ಥಿಗಳಿಗೆ, ಜಿಲ್ಲಾಡಳಿತ ವತಿಯಿಂದ ತರಬೇತಿಯನ್ನು ಶೀಘ್ರದಲ್ಲಿ ಪ್ರಾರಂಭಿಸಲು ಉದ್ದೇಶಿಸಲಾಗಿದೆ.
ಕೊನೆಯ ವರ್ಷದ ಪದವಿಯನ್ನು (ಯಾವುದೇ ಪದವಿ) ವ್ಯಾಸಂಗ ಮಾಡುತ್ತಿರುವ ಅಥವಾ ಪದವೀಧರರಾಗಿದ್ದು, ಉದ್ಯೋಗದಲ್ಲಿರುವ / ನಿರುದ್ಯೋಗಿ ವಿದ್ಯಾರ್ಥಿಗಳು ತರಬೇತಿಗೆ ಅರ್ಹರಾಗಿರುತ್ತಾರೆ.
ಉಡುಪಿ ಸಾರ್ವಜನಿಕ ಗ್ರಂಥಾಲಯನ್ನು ತರಬೇತಿ ಕೇಂದ್ರವಾಗಿಸಿಕೊಂಡು, ನಿಗದಿಯಾಗಿರುವ ಪಠ್ಯಾನುಸಾರ ತರಗತಿಗಳು, ಗ್ರಂಥಾಲಯ, ಪುಸ್ತಕಗಳು, ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಗತ್ಯವಿರುವ ಪತ್ರಿಕೆಗಳು, ನಿಯತಕಾಲಿಕೆಗಳು, ಅಂರ್ತಜಾಲದ ವ್ಯಾಪಕ ಬಳಕೆ, ಗುಂಪು ಚರ್ಚೆಗಳು, ಇತ್ಯಾದಿ ಮೂಲ ಸೌಕರ್ಯ ಮತ್ತು ಅವಕಾಶಗಳನ್ನು ಕಲ್ಪಿಸಿಕೊಡಲಾಗುವುದು.
ಈ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಯುಪಿಎಸ್‌ಸಿ/ ಕೆಪಿಎಸ್‌ಸಿ ಸೇರಿದಂತೆ ಯಾವುದೇ ಸ್ಪರ್ಧಾತ್ಮಕ ವಿಷಯಗಳಲ್ಲಿ ಪರಿಣಿತಿ ಪಡೆಯಬಹುದಾಗಿದೆ.
ಆಸಕ್ತ ವಿದ್ಯಾರ್ಥಿಗಳಿಗೆ ಆನ್‌ಲೈನ್ ನಲ್ಲಿ ಅರ್ಜಿಗಳನ್ನು ಸಲ್ಲಿಸಲು udupi.nic.in ವೆಬ್‌ಸೈಟ್‌ನಲ್ಲಿ ಅವಕಾಶ ಕಲ್ಪಿಸಲಾಗಿದ್ದು, ಅಕ್ಟೋಬರ್ 21 ರ ಒಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.