ಮಂಗಳೂರು: ಅ.20 ರಂದು ಮಹರ್ಷಿ ವಾಲ್ಮೀಕಿ ಜಯಂತಿ

 ಮಂಗಳೂರು: ಅ.20 ರಂದು ಮಹರ್ಷಿ ವಾಲ್ಮೀಕಿ ಜಯಂತಿ
Share this post

ಮಂಗಳೂರು, ಅ 19, 2021: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಮತ್ತು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಇದೇ ಅ.20 ಬೆಳಿಗ್ಗೆ 10.30ಕ್ಕೆ ಜಿಲ್ಲಾ ಪಂಚಾಯತ್‍ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್. ಅಂಗಾರ ಅವರು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಘನ ಉಪಸ್ಥಿತಿವಹಿಸುವರು. ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ್ ಕಾಮತ್ ಅವರು ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಲೋಕಸಭಾ ಸದಸ್ಯ ನಳಿನ್ ಕುಮಾರ್ ಕಟೀಲ್, ಮಂಗಳೂರು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಶಾಸಕರಾದ ಯು.ಟಿ. ಖಾದರ್, ಡಾ.ಭರತ್ ಶೆಟ್ಟಿ. ವೈ, ಹರೀಶ್ ಪೂಂಜ, ರಾಜೇಶ್ ನಾಯ್ಕ್. ಯು, ಸಂಜೀವ ಮಠಂದೂರು, ಉಮಾನಾಥ್.ಎ. ಕೋಟ್ಯಾನ್, ವಿಧಾನ ಪರಿಷತ್ ಶಾಸಕರಾದ ಕೆ. ಪ್ರತಾಪಚಂದ್ರ ಶೆಟ್ಟಿ, ಬಿ.ಎಂ. ಫಾರೂಕ್, ಕೆ. ಹರೀಶ್ ಕುಮಾರ್, ಆಯನೂರು ಮಂಜುನಾಥ್, ಎಸ್.ಎಲ್. ಭೋಜೇಗೌಡ, ಪ್ರತಾಪ್ ಸಿಂಹ ನಾಯಕ್. ಕೆ, ಕರ್ನಾಟಕ ರಾಜ್ಯ ವಿದ್ಯುನ್ಮಾನ ಅಭಿವೃದ್ಧಿ ನಿಗಮ ನಿಯಮಿತ (ಕಿಯೋನಿಕ್ಸ್) ಅಧ್ಯಕ್ಷ ಹರಿಕೃಷ್ಣ ಬಂಟ್ವಾಳ, ಕರ್ನಾಟಕ ಮೀನುಗಾರಿಕೆ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷ ನಿತೀನ್ ಕುಮಾರ್, ದಿ ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿಮಿಟೆಡ್‍ನ ಅಧ್ಯಕ್ಷ ಸಂತೋಷ ರೈ ಬೋಳಿಯಾರ್, ಕರ್ನಾಟಕ ಅಲೆಮಾರಿ/ಅರೆ ಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ. ರವೀಂದ್ರ ಶೆಟ್ಟಿ, ಮಂಗಳೂರು ಮಹಾನಗರ ಪಾಲಿಕೆ ಮೇಯರ್ ಪ್ರೇಮಾನಂದ ಶೆಟ್ಟಿ ಅವರು ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ದಯಾನಂದ ಕತ್ತಲಸಾರ್, ಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಡಾ. ಜಗದೀಶ್ ಪೈ, ಕರ್ನಾಟಕ ಅರೆ ಭಾಷೆ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಲಕ್ಷ್ಮೀ ನಾರಾಯಣ ಕಜೆಗದ್ದೆ, ಕರ್ನಾಟಕ ಬ್ಯಾರಿ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ರಹೀಂ ಉಚ್ಚಿಲ, ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ರವಿಶಂಕರ್ ಮಿಜಾರು, ಕರ್ನಾಟಕ ಕ್ರಿಶ್ಚಿಯನ್ ಅಭಿವೃದ್ಧಿ ಸಮಿತಿ ಅಧ್ಯಕ್ಷ ಜೋಯ್ಲಸ್ ಡಿ’ಸೋಜಾ, ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕುಮಾರ್, ಜಿಲ್ಲಾ ಪೋಲೀಸ್ ಅಧೀಕ್ಷಕ ಋಷಿಕೇಶ್ ಭಗವಾನ್ ಸೋನಾವಣೆ, ಮಂಗಳೂರು ನಗರ ಪೆÇಲೀಸ್ ಆಯುಕ್ತ ಎನ್. ಶಶಿಕುಮಾರ್, ಸಮಗ್ರ ಗಿರಿಜನ ಅಭಿವೃದ್ಧಿ ಯೋಜನೆಯ ಯೋಜನಾ ಸಮನ್ವಯಾಧಿಕಾರಿ ಬಿ.ಎಸ್. ಹೇಮಲತಾ ಹಾಗೂ ಇನ್ನಿತರರು ಉಪಸ್ಥಿತರಿರುವರು.

Subscribe to our newsletter!

Other related posts

error: Content is protected !!