ಮಂಗಳೂರು: ಅರ್ಜಿ ಆಹ್ವಾನ

 ಮಂಗಳೂರು: ಅರ್ಜಿ ಆಹ್ವಾನ
Share this post

ಮಂಗಳೂರು, ಅ 23, 2021: ನಗರದ ಬೊಂದೇಲ್‍ನ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆಯ ವ್ಯಾಪ್ತಿಯಲ್ಲಿ ಬರುವ ಸರ್ಕಾರಿ ಮಹಿಳಾ ಪಾಲಿಟೆಕ್ನಿಕ್‍ನಲ್ಲಿ 2021-2022ನೇ ಸಾಲಿನ ಫ್ರಥಮ ಡಿಪ್ಲೋಮಾ ಹಾಗೂ ಲ್ಯಾಟರಲ್ ಎಂಟ್ರಿ ಸ್ಕೀಂ ಮೂಲಕ 2 ನೇ ವರ್ಷ ಅಥವಾ 3 ನೇ ಸೆಮಿಸ್ಟರ್ ಡಿಪ್ಲೋಮಾ ಕೋರ್ಸಿನ ಪ್ರವೇಶಕ್ಕೆ ಅರ್ಜಿ ಆಹ್ವಾನಿಸಿದೆ.

ಕೋರ್ಸ್‍ಗಳ ವಿವರ: ಇಲೆಕ್ಟ್ರಾನಿಕ್ಸ್ ಅಂಡ್ ಕಮ್ಯೂನಿಕೇಶನ್ ಇಂಜಿನಿಯರಿಂಗ್, ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್, ಕಮರ್ಷಿಯಲ್ ಪ್ರಾಕ್ಟೀಸ್ (ಇಂಗ್ಲೀಷ್ ಮತ್ತು ಕನ್ನಡ) ಹಾಗೂ ಲೈಬ್ರೆರಿ ಅಂಡ್ ಇನ್‍ಫರ್ಮೇಮೇಶನ್ ಸೈನ್ಸ್ ಕೋರ್ಸ್.

ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅ.30 ರವರೆಗೆ ಅವಕಾಶ ಇದೆ.

ಹೆಚ್ಚಿನ ಮಾಹಿತಿಗೆ ಕಚೇರಿ ದೂ.ಸಂ: 0824-2482334 ಅಥವಾ ಮೊ.ಸಂ: 9448869332, 9480744667 ಸಂಪರ್ಕಿಸುವಂತೆ ಸರಕಾರಿ ಮಹಿಳಾ ಪಾಲಿಟೆಕ್ನಿಕ್‍ನ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!