ಉಡುಪಿ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆ
ಉಡುಪಿ, ಅ 25, 2021: ಉಡುಪಿಯ ಪ್ರಾದೇಶಿಕ ಸಾರಿಗೆ ಪ್ರಾಧಿಕಾರದ ಸಭೆಯನ್ನು ನವೆಂಬರ್ 10 ರಂದು ಅಪರಾಹ್ನ 4 ಗಂಟೆಗೆ ಜಿಲ್ಲಾಧಿಕಾರಿಗಳ ಕಛೇರಿ ಸಭಾಂಗಣದಲ್ಲಿ ಆಯೋಜಿಸಲಾಗಿದೆ.
ಅಕ್ಟೋಬರ್ 27 ರೊಳಗಡೆ ಪರವಾನಿಗೆ ಕುರಿತು ಸ್ವೀಕರಿಸಿದ ಅರ್ಜಿಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುವುದು.
ಸದರಿ ಸಭೆಯಲ್ಲಿ ಸಂಬಂಧಪಟ್ಟ ಬಸ್ಸು ಮಾಲಕರು ತಪ್ಪದೇ ಹಾಜರಾಗುವಂತೆ ಹಾಗೂ ಸಭೆಯ ಪ್ರಾರಂಭದ ಅರ್ಧ ಗಂಟೆ ಮೊದಲು ಸಾರ್ವಜನಿಕರಿಂದ ಸಾರಿಗೆ ವ್ಯವಸ್ಥೆ ಬಗ್ಗೆ ಕುಂದು ಕೊರತೆಗಳನ್ನು ಆಲಿಸಲಾಗುವುದು ಎಂದು ಪ್ರಕಟಣೆ ತಿಳಿಸಿದೆ.