24×7 ನೀರು ಸರಬರಾಜು ಯೋಜನೆ ಅನುಷ್ಠಾನ:ಅ.26 ರಂದು ಸಮಾಲೋಚನಾ ಸಭೆ
ಮಂಗಳೂರು, ಅ 25, 2021: ರಾಜ್ಯ ಸರಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ ಕ್ವಿಮಿಪ್ ಟ್ರಾಂಚ್-2 ರಡಿಯಲ್ಲಿ 24×7 ನೀರು ಸರಬರಾಜು ಯೋಜನೆ ಅನುಷ್ಠಾನಗೊಳಿಸುತ್ತಿದೆ.
ಈ ಕುರಿತು ಸಾರ್ವಜನಿಕರಿಗೆ ಮಾಹಿತಿ ನೀಡಲು ಕೆಯುಐಡಿಎಫ್ಸಿ ಹಾಗೂ ಮಂಗಳೂರು ಮಹಾನಗರ ಪಾಲಿಕೆ ಸಹಯೋಗದಿಂದ ನಾಳೆ (ಅ.26) ಸಂಜೆ 5.30 ಗಂಟೆಗೆ ಬೆಂದೂರು ವಾರ್ಡ್ ನಂ.38 ರಲ್ಲಿ ಸೈಂಟ್ ಆಗ್ನೇಸ್ ಕಾಲೇಜು ಅವೀಲ ಹಾಲ್ ನಲ್ಲಿ ಸಾರ್ವಜನಿಕ ಸಮಾಲೋಚನಾ ಸಭೆಯನ್ನು ಆಯೋಜಿಸಲಾಗಿದೆ ಎಂದು ಮಂಗಳೂರು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.