ಶಾಂತಿಗುಡ್ಡೆ: ಸಾರ್ವಜನಿಕರ ಧ್ವನಿಗೆ ಸ್ಪಂದಿಸಿದ ಗ್ರಾಮ ಪಂಚಾಯತ್
ಕಾಪು-ಶಿರ್ವ ರಸ್ತೆಯ ಶಾಂತಿಗುಡ್ಡೆ ಎಂಬಲ್ಲಿ ಸಾರ್ವಜನಿಕರು ಘನ ಮತ್ತು ದ್ರವ ತ್ಯಾಜ್ಯಗಳು ಹಾಗೂ ಪ್ಲಾಸ್ಟಿಕ ವಸ್ತುಗಳನ್ನು ಮನ ಬಂದಂತೆ ರಸ್ತೆ ಬದಿಗೆ ಎಸೆಯುವುದರಿಂದ ಪರಿಸರದ ದನಕರುಗಳಿಗೆ ಮತ್ತು ಜನರಿಗೆ ತೊಂದರೆ ಉಂಟಾಗುವುದರೊಂದಿಗೆ ಸಾಂಕ್ರಾಮಿಕ ಕಾಯಿಲೆಗಳ ಬಗ್ಗೆ ದೂರುಗಳು ಕೇಳಿ ಬಂದಿತ್ತು.
ಸುತ್ತ-ಮುತ್ತ ದಿನನಿತ್ಯ ಒಡಾಡುವ ನಾಗರಿಕರಿಗೆ ಕೆಟ್ಟ ವಾಸನೆಯಿಂದಾಗಿ ಮೂಗು ಮುಚ್ಚಿಕೊಂಡೇ ಹೋಗಬೇಕಾದ ಪರಿಸ್ಥಿತಿ ಬಂದೊದಗಿತ್ತು. ಇದರ ಬಗ್ಗೆ ಶಿರ್ವ ಸಂತ ಮೇರಿ ಕಾಲೇಜಿನ ಉಪನ್ಯಾಸಕ ಲೆಫ್ಟಿನೆಂಟ್ ಕೆ. ಪ್ರವೀಣ್ ಕುಮಾರ್ ಅಧಿಕಾರಿಗಳ ಗಮನ ಸೆಳೆದಿದ್ದರು.
ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಸವನ್ನುಇಂದು ಸ್ವಚ್ಛಗೊಳಿಸಿದ ಕುತ್ಯಾರು ಗ್ರಾಮ ಪಂಚಾಯತ್ ಅಧ್ಯಕ್ಷೆ (ಶ್ರೀಮತಿ ಲತಾ) ಹಾಗೂ ಸಿಬ್ಬಂದಿ ವರ್ಗದ ಸಕಾಲಿಕ ಸ್ಪಂದನೆಯನ್ನು ಕೆ. ಪ್ರವೀಣ್ ಕುಮಾರ್ ಶ್ಲಾಘಿಸಿದ್ದಾರೆ.