ಶಿಖರದಿಂದ ಸಾಗರದವರೆಗೆ ಯುವತಿಯರ ಸಾಹಸ ಯಾತ್ರೆ
ಉಡುಪಿ, ಅ 28, 2021: ಭಾರತದ ಸ್ವಾತಂತ್ರೋತ್ಸವದ ಅಮೃತ ಮಹೋತ್ಸವ ಅಂಗವಾಗಿ “ಶಿಖರದಿಂದ ಸಾಗರ” ಐತಿಹಾಸಿಕ ಯಾನದಲ್ಲಿ ಭಾಗಿಯಾಗಿರುವ ರಾಜ್ಯದ 5 ಯುವತಿಯರು ಕಾಶ್ಮೀರದಲ್ಲಿ (Kolahoi Mt) ಶಿಖರವನ್ನು ಯಸ್ವಿಯಾಗಿ ಏರಿ, ನಂರ ಲಡಾಖ್ ನಿಂದ 3,000 ಕಿ.ಮೀ ಸೈಕಲ್ ಯಾನ ಮಾಡುತ್ತಾ ಕಾರವಾರ ತಲುಪಿದ್ದು, ಕಾರವಾರದಿಂದ ಕರ್ನಾಟಕದ ಕರಾವಳಿ ಪ್ರದೇಶದಲ್ಲಿ 300 ಕಿ.ಮೀ ಸಮುದ್ರದಲ್ಲಿ ಕಯಾಕಿಂಗ್ ಯಾನ ಮಾಡುತ್ತಿದ್ದು, ಈ ಯುವತಿಯರ ತಂಡ ಇಂದು ಮಲ್ಪೆ ಸಮುದ್ರ ತೀರಕ್ಕೆ ಆಗಮಿಸಿದರು.
ಮಲ್ಪೆ ಸಮದ್ರ ತೀರದಲ್ಲಿ ಜಿಲ್ಲಾಡಳಿತದ ಪರವಾಗಿ ಇವರನ್ನು ಸ್ವಾಗತಿಸಿದ , ಪ್ರಭಾರ ಜಿಲ್ಲಾಧಿಕಾರಿ ಹಾಗೂ ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ನಂತರ ಮಾತನಾಡಿ, ಯುವತಿಯರು ಸಾಹಸ ಕ್ರೀಡೆಗಳಲ್ಲಿ ತಮ್ಮನ್ನು ಸಕ್ರೀಯವಾಗಿ ತೊಡಗಿಸುವುದರ ಜೊತೆಗೆ ರಾಷ್ಟ್ರೀಯ, ಅಂತರಾಷ್ಟ್ರೀಯ ಮಟ್ಟದಲ್ಲಿ ಮತು ಓಲಂಪಿಕ್ನಲ್ಲಿ ಉತ್ತಮ ಸಾಧನೆಯನ್ನು ಮಾಡುವ ದಿಟ್ಟ ನಿರ್ಧಾರ ಮಾಡಬೇಕು. ಇದಕ್ಕಾಗಿ ಈ ಯುವತಿಯರಲ್ಲಿರುವ ಸಾಹಸ ಗುಣಗಳು, ಛಲ ಮುಂದಿನ ದಿನಗಳಲ್ಲಿ ರಾಜ್ಯದ ಎಲ್ಲಾ ಯುವತಿಯರು ಮತ್ತು ಮಹಿಳೆಯರಿಗೂ ಮಾದರಿಯಾಗಬೇಕು ಎಂದರು.
ಈ ಸಾಹಸ ಯತ್ರೆಯಲ್ಲಿ ತಮಗೆ ಎದುರಾದ ಎಲ್ಲ ಸಂಕಷ್ಟಗಳನ್ನು ದಿಟ್ಟತನದಿಂದ ಎದುರಿಸಿರುವ, ಈ ಯುವತಿಯರ ಸಾಧನೆ , ಕೇವಲ ರಾಜ್ಯಕ್ಕೆ , ದೇಶಕ್ಕೆ ಮಾತ್ರ ಸೀಮಿತಗೊಳ್ಳದೆ ಮುಂದಿನ ವರ್ಷಗಳಲ್ಲಿ ದೊಡ್ಡ ಮಟ್ಟದಲ್ಲಿ ಸಾಧನೆ ಮಾಡುವ ಛಲವನ್ನು ಹೊಂದುವುದರ ಜೊತೆಗೆ , ಯುವ ಪೀಳಿಗೆಗೆ ಮಾದರಿಯಾಗಬೇಕು. ಸ್ತ್ರೀಯರಲ್ಲಿನ ಶಕ್ತಿ , ಸಾಹಸ, ಧೈರ್ಯ ವನ್ನು ಬಿಂಬಿಸುವ ವಿಭಿನ್ನವಾದ ಕಾರ್ಯಕ್ರಮವಾಗಿದೆ ಎಂದರು.
ಉಡುಪಿ ಜಿಲ್ಲೆಯಲ್ಲಿಯೂ ಸಹ ಸಾಹಸ ಕಾರ್ಯಕ್ರಮಗಳ ತರಬೇತಿಗೆ ಈಗಾಗಲೇ ಪಡುಕೆರೆಯೆಲ್ಲಿ ಸ್ಥಳ ಗುರುತಿಸಲಾಗಿದ್ದು, ಜನರಲ್ ತಮ್ಮಯ್ಯ ಸಾಹಸ ಅಕಡೆಮಿಯ ಮೂಲಕ ಇಲ್ಲೂ ಸಹ ಸಾಹಸ ಕ್ರೀಡೆಗಳ ತರಬೇತಿ ಕೇಂದ್ರ ಆರಂಭವಾಗಲಿದ್ದು,ಜಿಲ್ಲೆಯ ಯುವ ಜನತೆಯ ಈ ಕೇಂದ್ರದ ಪ್ರಯೋಜನ ಪಡೆಯಬೇಕು ಎಂದರು.
ತಮ್ಮ ಈ ಸಾಹಸ ಯಾತ್ರೆಯ ಅನುಭವ ಹಂಚಿಕೊಂಡ ಯುವತಿಯರು, ಶಿಖರವೇರುವ ಸಂದರ್ಭದಲ್ಲಿ 25 ಕೆಜಿಗೂ ಅಧಿಕ ಭಾರದ ಬ್ಯಾಗ್ ಗಳನ್ನು ಹೊತ್ತುಕೊಂಡು, ಜೀವವನ್ನು ಪಟಕ್ಕಿಟ್ಟು ಸಾಹಸ ಮಾಡಿದ್ದು, ಯಾನದ ಸಂಪೂರ್ಣ ಸಂದರ್ಭದಲ್ಲಿ ತಮ್ಮ ಎಲ್ಲಾ ಅಗತ್ಯತೆಗಳಿಗೆ ಯಾರನ್ನೂ ಅವಲಂಬಿಸದೇ ತಾವೇ ಸ್ವತ: ಅಡಿಗೆ ಮಾಡುವುದು ಸೇರಿದಂತೆ ಟೆಂಟ್ ಗಳನ್ನು ಹಾಕುವ ಕೆಲಸಗಳನ್ನು ಮಾಡಿದ್ದು, ಶಿಖರವನ್ನು ನಿಗಧಿತ ಅವಧಿಗಿಂತ ಮುಂಚಿತವಾಗಿಯೇ ಏರಿ ಸಾಧನೆ ಮಾಡಿದ್ದೇವೆ ,ಸಾಧನೆಯ ಈ ಹಾದಿಯಲ್ಲಿ ಎದುರಾದ ಎಲ್ಲಾ ಆರೋಗ್ಯ ಸಮಸ್ಯೆಗಳನ್ನು ಲೆಕ್ಕಿಸದೇ ನಿಗಧಿತ ಗುರಿ ಸಾದನೆಯೆಡೆಗೆ ಬಂದಿದ್ದೇವೆ , ಲಡಾಖ್ ನಿಂದ ನಡೆಸಿದ ಸೈಕ್ಲಿಂಗ್ ಪ್ರಯಾಣದಲ್ಲಿ ಕಂಡು ಬಂದ ವಿವಿಧ ಪ್ರದೇಶದಲ್ಲಿನ ಯುವತಿಯರು ಮತ್ತು ಮಹಿಳೆಯರ ಸಮಸ್ಯೆಗಳನ್ನು ಕಂಡಿದ್ದು, ಮಹಿಳೆಯರು ಮನೆಯಿಂದ ಹೊರಬಂದು ಸಾಹಸಿಗಳಾಗಬೇಕು ಎನ್ನುವ ಉದ್ದೇಶದಿಂದ ಮುಂದಿನ ದಿನದಲ್ಲಿ ಅರಿವು ಕಾರ್ಯಕ್ರಮಗಳನ್ನು ಮಾಡುವ ಉದ್ದೇಶ ಇದೆ , ಪೋಷಕರು ಮತ್ತು ತರಬೇತುದಾರರು ಸಂಪೂರ್ಣ ಪ್ರೋತ್ಸಾಹ ಮತ್ತು ಬೆಂಬಲ ನೀಡಿದ್ದಾರೆ ಎಂದರು.
“ಶಿಖರದಿಂದ ಸಾಗರ” ಈ ಐತಿಹಾಸಿಕ ಯಾನದಲ್ಲಿ ಶಿವಮೊಗ್ಗದ ಐಶ್ವರ್ಯ.ವಿ, ಮತ್ತು ಧನಲಕ್ಷ್ಮೀ, ಬೆಂಗಳೂರಿನ ಆಶಾ, ಮಡಿಕೇರಿಯ ಪುಪ್ಪ, ಮೈಸೂರಿನ ಬಿಂದು ಭಾಗವಹಿಸಿದ್ದಾರೆ.
ಕಾರ್ಯಕ್ರಮದಲ್ಲಿ ಉಡುಪಿ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ಕ್ಲಿಫರ್ಡ್ ಲೋಬೋ , ಸಾಹಸ ಯಾತ್ರೆಯ ಮಾರ್ಗದರ್ಶಕ ಶಬ್ಬೀರ್ ಮತ್ತಿತರರು ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ. ರೋಶನ್ಕುಮಾರ್ ಶೆಟ್ಟಿ ,ಸ್ವಾಗತಿಸಿ , ವಂದಿಸಿದರು.
ಸುಮಾರು 60 ದಿನಗಳ ಅಭಿಯಾನ ಇದಾಗಿದ್ದು,, ಸ್ತ್ರೀ ಶಕ್ತಿ ಸಾಹಸ, ಧೈರ್ಯ, ನಾರಿಯ ಪುರುಷರ ವಿಕಾಸ ಎನ್ನುವಂತಹ ತತ್ವವನ್ನು ಬಿಂಬಿಸುವ ವಿಭಿನ್ನವಾದ ಒಂದು ಕಾರ್ಯಕ್ರಮವಾಗಿರುತ್ತದೆ. ಭಾರತೀಯ ಪರ್ವತರೋಹಣ ಸಂಸ್ಥೆಯ ದಕ್ಷಿಣ ವಲಯ ಹಾಗೂ ಜನರಲ್ ತಿಮ್ಮಯ್ಯ ರಾಷ್ಟ್ರೀಯ ಸಾಹಸ ಅಕಾಡೆಮಿಯ ಸಹಯೋಗದೊಂದಿಗೆ ನಡೆಸುತ್ತಿರುವ ಈ ಯಾನವನ್ನು ಅಗಸ್ಟ್ 16ರಂದು ಧ್ವಜಾರೋಹಣ ಮಾಡಿದ್ದು, ಕಯಾಕಿಂಗ್ ಯಾನದ ಮೂಲಕ ಮಂಗಳೂರಿನಲ್ಲಿ ಮುಕ್ತಾಯಗೊಳ್ಳಲಿದೆ.