ಕಾರವಾರ: ಸಂಭ್ರಮದ ರಾಜ್ಯೋತ್ಸವ ಆಚರಣೆ

 ಕಾರವಾರ: ಸಂಭ್ರಮದ ರಾಜ್ಯೋತ್ಸವ ಆಚರಣೆ
Share this post

ಕಾರವಾರ ನ. 1, 2021: ಅಭಿವೃದ್ಧಿಯೇ ಆಡಳಿತ ಮಂತ್ರ ಎಂಬುದು ನಮ್ಮ ಸರ್ಕಾರದ ಧ್ಯೇಯಘೋಷ. “ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು” ಎಂಬ ಆಶಯದೊಂದಿಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದ ಸರ್ಕಾರ ಹಲವು ಜನಪರ ಯೋಜನೆಗಳನ್ನು ರೂಪಿಸಿದ್ದು, ರಾಜ್ಯದ ಕಟ್ಟಕಡೆಯ ವ್ಯಕ್ತಿಗೂ ಸರ್ಕಾರದ ಸೌಲಭ್ಯಗಳು ಸಿಗಬೇಕೆಂಬುದು ನಮ್ಮ ಸರ್ಕಾರದ ಉದ್ದೇಶವಾಗಿದೆ ಎಂದು ಕಾರ್ಮಿಕ ಖಾತೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಹೇಳಿದರು.

ಅವರು ಸೋಮವಾರ ಜಿಲ್ಲಾ ಪೊಲೀಸ್ ಪರೇಡ್ ಮೈದಾನದಲ್ಲಿ ಕನ್ನಡ ರಾಜ್ಯೋತ್ಸವ ಅಂಗವಾಗಿ ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದರು.

“ಬಸವರಾಜ ಬೊಮ್ಮಾಯಿರವರ ನೇತೃತ್ವದ ಸರ್ಕಾರ ಕನ್ನಡ ನಾಡಿನ ಕಲೆ, ಸಂಸ್ಕೃತಿ, ಭಾಷೆ, ನೆಲ, ಜಲ ಸಂರಕ್ಷಣೆ ಸೇರಿದಂತೆ ಸರ್ವಾಂಗೀಣ ಅಭಿವೃದ್ಧಿಗೆ ಪೂರಕವಾಗಿ ಶ್ರಮಿಸುತ್ತಿದೆ. ಕನ್ನಡ ಮತ್ತು ಸಂಸ್ಕøತಿ ಇಲಾಖೆ ಮೂಲಕ ಹಲವಾರು ಕನ್ನಡ ಪರ ಕಾರ್ಯಗಳನ್ನು ಮಾಡಲಾಗುತ್ತಿದೆ. ಅ. 28 ರಂದು ಕರ್ನಾಟಕ ಸರ್ಕಾರ ಲಕ್ಷ ಕಂಠಗಳ ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಿತ್ತು. ನನ್ನ ಜಿಲ್ಲೆಯಲ್ಲಿ ಸುಮಾರು 35,000 ಜನರು ಗೀತ ಗಾಯನವನ್ನು ಮಾಡುವುದರ ಮೂಲಕ ನಾಡಿಗೆ ಗೌರವ ನಮನವನ್ನು ಸಲ್ಲಿಸಿರುವುದು ಶ್ಲಾಘನೀಯವಾಗಿರುತ್ತದೆ. ಸರಕಾರ ಕನ್ನಡದ ಕೆಲಸಗಳಿಗೆ ವಿಶೇಷ ಅನುದಾನಗಳನ್ನು ಮೀಸಲಿರಿಸುವದರೊಂದಿಗೆ ಕನ್ನಡ ಭಾಷೆ, ನಾಡು ನುಡಿ ಸಂರಕ್ಷಣೆಗೆ ವಿಶೇಷ ಆದ್ಯತೆ ನೀಡಿದೆ,” ಎಂದರು.

“ಅರಂಕುಶವಿಟ್ಟೊಡಂ ನೆನವುದೆನ್ನ ಮನಂ ಬನವಾಸಿ ದೇಶಮಂ”ಎಂದು ಬನವಾಸಿಯ ಸೊಬಗನ್ನು ನೆನೆಯುವ ಆದಿಕವಿ ಪಂಪನ ಮಾತಿನಂತೆ ಸಮೃದ್ಧಿಯ ನೆಲೆಬೀಡು, ಕನ್ನಡದ ಮೊದಲ ದೊರೆ ಕದಂಬರ ರಾಜಧಾನಿ ಐತಿಹಾಸಿಕ ಬನವಾಸಿ ಇರುವ ಜಿಲ್ಲೆ ಹಾಗೂ ಕನ್ನಡ ನಾಡು, ನುಡಿ, ಭಾಷೆ, ನೆಲ, ಜಲ ವಿಷಯಗಳಿಗೆ ಹೆಚ್ಚು ಸ್ಪಂದನೆ ನೀಡುವ ಈ ಜಿಲ್ಲೆಯಲ್ಲಿ ಕನ್ನಡ ಭಾವುಟವನ್ನು ಏರಿಸುವ ಸದಾವಕಾಶ ದೊರೆತಿರುವುದು ನನ್ನ ಪುಣ್ಯ ಎಂದು ಹರ್ಷ ವ್ಯಕ್ತ ಪಡಿಸಿದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಸರಕಾರಿ ಕಲಾ ಮತ್ತು ವಿಜ್ಞಾನ ಕಾಲೇಜಿನ 8ನೇ ಕರ್ನಾಟಕ ನೇವಲ್ ಯೂನಿಟ್, ಚೆಂಡಿಯಾ ಘಟಕದ ಗೃಹ ರಕ್ಷಕ ದಳ, ಅರಣ್ಯ ಇಲಾಖೆ, ಸರಕಾರಿ ಪಾಲಿಟೆಕ್ನಿಕ್ ಕಾಲೇಜಿನ 29 ನೇ ಕರ್ನಾಟಕ ಎನ್.ಸಿ.ಸಿ ,ಮಹಿಳಾ ಪೊಲೀಸ್ ತುಕಡಿ ಮತ್ತು ಕಾರವಾರ ಉಪ ವಿಭಾಗದ ನಾಗರಿಕ ಪೊಲೀಸ್ ತುಕಡಿಗಳಿಂದ ಆಕರ್ಷಕ ಪಥಸಂಚಲನ ನಡೆಸಲಾಯಿತು.

ಬಳಿಕ ಕಟ್ಟಡ ಕಾರ್ಮಿಕರಿಗೆ ಮಂಜೂರಾಗಿರುವ ವೈಧ್ಯಕೀಯ ಹಾಗೂ ಧನ ಸಹಾಯದ ಚೆಕ್ ವಿತರಣೆ ಮಾಡಲಾಯಿತು. ಶಾಸಕಿ ರೂಪಾಲಿ ನಾಯ್ಕ, ಕಾರವಾರ ನಗರಸಭೆ ಅಧ್ಯಕ್ಷ ಡಾ. ನಿತಿನ ಪಿಕಳೆ, ಜಿಲ್ಲಾಧಿಕಾರಿ ಮುಲೈ ಮುಗಿಲನ್ ಎಂ.ಪಿ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಪ್ರಿಯಾಂಗಾ ಎಂ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಸುಮನ ಪೆನ್ನೆಕರ್ ಅಪರ ಜಿಲ್ಲಾಧಿಕಾರಿ ಕೃಷ್ಣಮೂರ್ತಿ ಹೆಚ್. ಕೆ. ಎಸಿ ವಿದ್ಯಾಶ್ರಿ ಚಂದರಗಿ ಸೇರಿದಂತೆ. ಮತ್ತಿತರರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು

ಕನ್ನಡಾಂಭೆ ಭವಚಿತ್ರಕ್ಕೆ ನಮನ : ರಾಜ್ಯೋತ್ಸವ ಅಂಗವಾಗಿ ಬೆಳಿಗ್ಗೆ 8 ಗಂಟೆಗೆ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಆಕರ್ಷಕ ರಥದಲ್ಲಿ ಇರಿಸಲಾಗಿದ್ದ ಕನ್ನಡಾಂಬೆ ಭಾವಚಿತ್ರಕ್ಕೆ ಶಾಸಕಿ ರೂಪಾಲಿ ಎಸ್ ನಾಯ್ಕ ಪೂಜೆ ಸಲ್ಲಿಸಿ ಮೆರವಣಿಗೆಗೆ ಚಾಲನೆ ನೀಡಿದರು.

Subscribe to our newsletter!

Other related posts

error: Content is protected !!