ಅರಿವು ಯೋಜನೆ: ವಿದ್ಯಾಭ್ಯಾಸ ಸಾಲಕ್ಕಾಗಿ ಅರ್ಜಿ ಆಹ್ವಾನ
ಕಾರವಾರ, ನ 10, 2021: ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದಿಂದ 2011-1 ಸಾಲಿನ ಮತೀಯ ಅಲ್ಪಸಂಖ್ಯಾತರಾದ ಮುಸ್ಲಿಂ, ಕ್ರಿಶ್ಚಿಯನ, ಜೈನ, ಸಿಖ್, ಬೌದ್ಧ ಹಾಗೂ ಪಾರ್ಸಿ ಸಮುದಾಯದ ಅರ್ಹ ವಿದ್ಯಾರ್ಥಿಗಳಿಂದ ಅರಿವು ಯೋಜನೆಯಡಿ ಸಾಲ ಸೌಲವ್ಯಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.
ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ (ಏಇಂ) ನಡೆಸಲ್ಪಡುವ ಅರ್ಹತಾ ಪರೀಕ್ಷೆಗೆ ಹಾಜರಾಗಿರುವ ವಿದ್ಯಾರ್ಥಿಗಳಿಗೆ ಇದು ಅನ್ವಯಿಸುತ್ತಿದ್ದು, ವಿದ್ಯಾರ್ಥಿಯು ಏಇಂ ಸಮಾಲೋಚನೆ (KEA) ಹೊಗುವ ದಿನವೇ ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ.
ಆಸಕ್ತರು ವೆಬ್ಸೈಟ್ ww.kmdconline.karnataka.gov.in ಮೂಲಕ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ವ್ಯವಸ್ಥಾಪಕರು, ಜಿಲ್ಲಾ ವ್ಯವಸ್ಥಾಪಕರ ಕಛೇರಿ ಕರ್ನಾಟಕ ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ(ನಿ) ವಾಸೀಂ ಮಂಜಿಲ್, 1ನೇ ಮಹಡಿ, ಹೈ ಚರ್ಚ್ ರಸ್ತೆ, ಕಾರವಾರ ದೂರವಾಣಿ ಸಂಖ್ಯೆ:08382-221180 ಸಂಪರ್ಕಿಸಬಹುದೆಂದು ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮ ನಿಯಮಿತದ ಜಿಲ್ಲಾ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.