ಪ್ರೌಢಶಾಲಾ ಸಹ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ

 ಪ್ರೌಢಶಾಲಾ ಸಹ ಶಿಕ್ಷಕರ ತಾತ್ಕಾಲಿಕ ಜೇಷ್ಠತಾ ಕರಡು ಪಟ್ಟಿ ಪ್ರಕಟ: ಆಕ್ಷೇಪಣೆ ಆಹ್ವಾನ
Share this post

ಉಡುಪಿ, ನ 09, 2021: ಜನವರಿ 1, 2021 ರಲ್ಲಿ ಇದ್ದಂತೆ ಮೈಸೂರು ವಿಭಾಗದ ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರುಗಳ ಗ್ರೇಡ್-2 ತತ್ಸಮಾನ ವೃಂದದ ತಾತ್ಕಾಲಿಕ ಜೇಷ್ಠತಾ ಕರಡು ಪಟ್ಟಿಯನ್ನು ಇಲಾಖಾ ವೆಬ್‌ಸೈಟ್ www.schooleducation.kar.nic.in ನಲ್ಲಿ ಪ್ರಕಟಿಸಲಾಗಿದೆ. 

ಕರಡು ತಾತ್ಕಾಲಿಕ ಜೇಷ್ಠತಾ ಪಟ್ಟಿಗೆ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಬಾದಿತ ಶಿಕ್ಷಕರು ನವೆಂಬರ್ 18 ರ ಕಚೇರಿ ಅವಧಿಯೊಳಗೆ ಅಂತರ್‌ಜಾಲದಲ್ಲಿ ಪ್ರಕಟಿಸಲಾದ ಪಟ್ಟಿಯಲ್ಲಿ ಹೆಸರು ಇರುವ ಪಟ್ಟಿಯ ಮುದ್ರಿತ ಪ್ರತಿಯೊಂದಿಗೆ, ಸಮರ್ಥನೀಯ ದಾಖಲೆಗಳೊಂದಿಗೆ ನಿಗದಿತ ನಮೂನೆಯಲ್ಲಿ ಮುಖ್ಯ ಶಿಕ್ಷಕರ ದೃಢೀಕರಣದೊಂದಿಗೆ, ಉಪನಿರ್ದೇಶಕರು (ಆಡಳಿತ), ಸಾರ್ವಜನಿಕ ಶಿಕ್ಷಣ ಇಲಾಖೆ, ರಜತಾದ್ರಿ, ಮಣಿಪಾಲ, ಉಡುಪಿ ಇವರಿಗೆ ಸಲ್ಲಿಸುವಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!