ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲಿಸಲು ಕಂಟ್ರೋಲ್ ರೂಂ

 ನೀತಿ ಸಂಹಿತೆ ಉಲ್ಲಂಘನೆ: ದೂರು ದಾಖಲಿಸಲು ಕಂಟ್ರೋಲ್ ರೂಂ
Share this post

ಉಡುಪಿ, ನ 13, 2021: ದಕ್ಷಿಣ ಕನ್ನಡ ಸ್ಥಳೀಯ ಪ್ರಾಧಿಕಾರ ಚುನಾವಣಾ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್ ದ್ವೈವಾರ್ಷಿಕ ಚುನಾವಣೆ-2021 ಕ್ಕೆ ಸಂಬಂಧಿಸಿದಂತೆ, ಚುನಾವಣಾ ವೇಳಾಪಟ್ಟಿಯು ಭಾರತ ಚುನಾವಣಾ ಆಯೋಗದಿಂದ  ಪ್ರಕಟಿಸಲಾಗಿದೆ.

ಜಿಲ್ಲೆಯಾದ್ಯಂತ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಸದರಿ ಚುನಾವಣಾ ಸಂಬಂಧ ಮಾದರಿ ನೀತಿ ಸಂಹಿತೆ ಉಲ್ಲಂಘನೆಯನ್ನು ತಡೆಗಟ್ಟುವ ಸಲುವಾಗಿ ಚುನಾವಣಾ ಸಮಯದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ನೋಡಲ್ ಅಧಿಕಾರಿ ಹಾಗೂ ಫ್ಲೈಯಿಂಗ್ ಸ್ಕ್ವಾರ್ಡ್ ಗಳನ್ನು ನೇಮಕ ಮಾಡಲು ಆದೇಶಿಸಲಾಗಿದೆ.   

ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘನೆ ಆಗಿರುವ ಪ್ರಕರಣಗಳ ಬಗ್ಗೆ ಸಾರ್ವಜನಿಕರಿಗೆ ದೂರುಗಳನ್ನು ಸಲ್ಲಿಸಲು ಉಡುಪಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕಂಟ್ರೋಲ್ ರೂಂ ಅನ್ನು ತೆರೆಯಲಾಗಿದ್ದು, ಕಂಟ್ರೋಲ್ ರೂಂ ದೂರವಾಣಿ ಸಂಖ್ಯೆ: 0820-2574802 ಗೆ ಸಾರ್ವಜನಿಕರು ಕರೆ ಮಾಡಿ ದೂರುಗಳನ್ನು ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!