ನಾಗರೀಕ ಬಂದೂಕು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ

 ನಾಗರೀಕ ಬಂದೂಕು ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ನ 15, 2021: ಜಿಲ್ಲಾ ಪೊಲೀಸ್ ಘಟಕದಿಂದ ಮುಂಬರುವ ಡಿಸೆಂಬರ್ ಮೊದಲ ವಾರದಲ್ಲಿ ನಗರದ ಜಿಲ್ಲಾ ಕವಾಯತು ಮೈದಾನ (ಡಿಎಆರ್) ದಲ್ಲಿ ನಾಗರೀಕ ಬಂದೂಕು ತರಬೇತಿ ಶಿಬಿರ ಆಯೋಜಿಸಲಾಗಿದೆ.

ಜಿಲ್ಲೆಯ ಎಲ್ಲಾ ಪೊಲೀಸ್ ಠಾಣೆಗಳಲ್ಲಿ ಹಾಗೂ ಡಿಎಆರ್ ಕಚೇರಿಯಲ್ಲಿ ಅರ್ಜಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ನವೆಂಬರ್ 30 ರೊಳಗೆ ಸಲ್ಲಿಸಬೇಕು.

ಜಿಲ್ಲಾ ಪೊಲೀಸ್ ಠಾಣಾ ವ್ಯಾಪ್ತಿಗೆ ಸಂಬಂಧಿಸಿದಂತೆ ಆಸಕ್ತ ನಾಗರೀಕರು ಅರ್ಜಿ ಆಯಾ ಪೊಲೀಸ್ ಠಾಣೆಗಳಿಂದ ಪಡೆದುಕೊಂಡು ಭರ್ತಿ ಮಾಡಿ ಸಲ್ಲಿಸಬೇಕು.

ಅರ್ಹ ನಾಗರೀಕರಿಗೆ ಮಾತ್ರ ಡಿಸೆಂಬರ್ ಮೊದಲ ವಾರಗಳ ಪ್ರತೀ ದಿನ ಬೆಳಿಗ್ಗೆ ಅಥವಾ ಸಂಜೆ 90 ನಿಮಿಷಗಳ ತರಬೇತಿ ನೀಡಲಾಗುತ್ತದೆ.

ಹೆಚ್ಚಿನ ಮಾಹಿತಿಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆ ಅಥವಾ ಮಂಗಳೂರು ಡಿಎಆರ್ ಕಚೇರಿ ದೂ.ಸಂ.:0824-2220512 ಸಂಪರ್ಕಿಸುವಂತೆ ಜಿಲ್ಲಾ ಪೊಲೀಸ್ ಅಧೀಕ್ಷಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!