ಬೆಂಬಲ ಬೆಲೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ

 ಬೆಂಬಲ ಬೆಲೆಯಡಿ ಭತ್ತ ಖರೀದಿ ಪ್ರಕ್ರಿಯೆ ಆರಂಭ
Share this post

ಮಂಗಳೂರು ನ.15, 2021: ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಇದೇ ನವೆಂಬರ್ 15 ರಿಂದ ಬೆಂಬಲ ಬೆಲೆಗೆ ಭತ್ತ ಖರೀದಿ ಪ್ರಕ್ರಿಯೆ ಆರಂಭಗೊಂಡಿದೆ.

ಕೃಷಿ ಇಲಾಖೆಯ ‘ಫ್ರೂಟ್ಸ್’ (https://fruits.karnataka.gov.in/) ದತ್ತಾಂಶದ ಮೂಲಕ ರೈತರ ಮಾಹಿತಿಯನ್ನು ನೇರವಾಗಿ ಪಡೆದುಕೊಳ್ಳಲಾಗುತ್ತದೆ. ಕೃಷಿ ಇಲಾಖೆ ಒದಗಿಸಿರುವ ಸರಾಸರಿ ಬೆಳೆಯಾಧರಿಸಿ ಹಾಗೂ ಕೇಂದ್ರ ಸರಕಾರದ ಮಾರ್ಗ ಸೂಚಿಗಳನ್ವಯ ಕನಿಷ್ಟ ಬೆಂಬಲ ಬೆಲೆ ಯೋಜನೆಯಡಿ ಭತ್ತವನ್ನು ಬೆಂಬಲ ಬೆಲೆಯಡಿ ನೀಡುವ ರೈತರು ನೋಂದಣಿ ಮಾಡಿಕೊಳ್ಳಬಹುದು.

ನೋಂದಣಿ ಮಾಡಿದ ರೈತರಿಂದ ಭತ್ತವನ್ನು ಸರಕಾರ ನಿಗದಿಪಡಿಸುವ ಅಕ್ಕಿ ಮಿಲ್‍ಗಳ ಮೂಲಕ ನೇರವಾಗಿ ಖರೀದಿಸಲಾಗುತ್ತದೆ. ಕೇಂದ್ರ ಸರಕಾರವು ಪ್ರತಿ ಕ್ವಿಂಟಾಲ್ ಸಾಮಾನ್ಯ ಭತ್ತಕ್ಕೆ 1940 ರೂ.ಗಳು ಹಾಗೂ ಪ್ರತಿ ಕ್ವಿಂಟಾಲ್ ಗ್ರೇಡ್ ಎ ಭತ್ತಕ್ಕೆ 1960 ರೂ.ಗಳನ್ನು ನಿಗದಿಪಡಿಸಿದೆ.  ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ನಿಗಮವನ್ನು ರೈತರಿಂದ ಭತ್ತ ಖರೀದಿಸುವ ಸಂಗ್ರಹಣಾ ಏಜೆನ್ಸಿಯಾಗಿ ನೇಮಕ ಮಾಡಲಾಗಿದೆ.

ಜಿಲ್ಲೆಯಲ್ಲಿ ಕೆ.ಎಫ್.ಸಿ.ಎಸ್.ಸಿಯ ಶಕ್ತಿನಗರ – ಮಂಗಳೂರು, ಮೂಡಬಿದ್ರೆ, ಬಂಟ್ವಾಳ, ಬೆಳ್ತಂಗಡಿ, ಪುತ್ತೂರು ಹಾಗೂ ಸುಳ್ಯ ಭತ್ತ ಖರೀದಿಗೆ ನೋಂದಣಿ ಕೇಂದ್ರಗಳಾಗಿವೆ ಎಂದು  ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.  

Subscribe to our newsletter!

Other related posts

error: Content is protected !!