ಉಡುಪಿ: ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ರಕ್ತದಾನ ಶಿಬಿರ
ಉಡುಪಿ, ನ 18, 2021: ಕರ್ನಾಟಕ ರತ್ನ ಪುನೀತ್ ರಾಜ್ಕುಮಾರ್ ಸ್ಮರಣಾರ್ಥ ನವೆಂಬರ್ 20 ರಂದು ಬೆಳಗ್ಗೆ 10 ಗಂಟೆಯಿಂದ ನಗರ ಆರೋಗ್ಯ ಕೇಂದ್ರದಲ್ಲಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ.
ಜಿಲ್ಲಾ ಆರೋಗ್ಯ ಇಲಾಖೆ, ಎನ್.ಹೆಚ್.ಎಮ್ ನೌಕರರ ಜಿಲ್ಲಾ ಸಂಘ, ಜಿಲ್ಲಾ ಸರ್ಕಾರಿ ನೌಕರರ ಸಂಘ, ರಕ್ತನಿಧಿ ಜಿಲ್ಲಾಸ್ಪತ್ರೆ ಅಜ್ಜರಕಾಡು, ಲಯನ್ಸ್ ಕ್ಲಬ್ ಹಾಗೂ ಅಪ್ಪು ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇವರ ಸಂಯುಕ್ತ ಆಶ್ರಯದಲ್ಲಿಈ ಶಿಬಿರ ನಡೆಯಲಿದೆ.