ನ.24 ರಿಂದ ಶಿಕ್ಷಕರ ವರ್ಗಾವಣೆಗಾಗಿ ಕೌನ್ಸೆಲಿಂಗ್
ಮಂಗಳೂರು ನ.23, 2021: 2019-20ನೇ ಸಾಲಿನ ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಾಮಾನ್ಯ ವರ್ಗಾವಣೆಗಳಲ್ಲಿನ ಕೋರಕೆ ವರ್ಗಾವಣೆಯ ಕೌನ್ಸೆಲಿಂಗ್ ಇದೇ ನ.24 ರಿಂದ 30 ವರೆಗೆ ಮಂಗಳೂರಿನ ಗಾಂಧಿನಗರದ ಬಿ.ಆರ್.ಸಿ ಕೇಂದ್ರದಲ್ಲಿ ನಡೆಯಲಿದೆ.
ಸಂಬಂಧಿಸಿದ ಶಿಕ್ಷಕರು ನ. 24 ರಿಂದ 30 ವರೆಗೆ ಬೆಳಿಗ್ಗೆ 10 ಗಂಟೆಗೆ ಕಡ್ಡಾಯವಾಗಿ ಕೌನ್ಸಲಿಂಗ್ನಲ್ಲಿ ಭಾಗವಹಿಸಬೇಕು. ಒಂದು ವೇಳೆ ನಿಗದಿತ ಸಮಯದಲ್ಲಿ ಹಾಜರಾಗದಿದ್ದಲ್ಲಿ ಸಂಬಂಧಿಸಿದ ಶಿಕ್ಷಕರೇ ನೇರ ಜವಾಬ್ದಾರರಾಗಿರುತ್ತಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.