ಸೇಕ್ರೆಡ್ ಹಾರ್ಟ್ ಕಾಲೇಜಿನಲ್ಲಿ ಬೃಹತ್ ರಕ್ತದಾನ ಶಿಬಿರ
ಮಡಂತ್ಯಾರ್ , ನ 24, 2021: ಸೇಕ್ರೆಡ್ ಹಾರ್ಟ್ ಕಾಲೇಜು ಮಡಂತ್ಯಾರ್ ನ ಎನ್ ಎಸ್ ಎಸ್ ,ಎನ್ ಸಿ ಸಿ,ಯೂತ್ ರೆಡ್ ಕ್ರಾಸ್, ರೋವರ್ಸ್ ರೇಂಜರ್ಸ್,ರೆಡ್ ರಿಬನ್ ಕ್ಲಬ್ ಹಾಗೂ ರೋಟರಿ ಕ್ಲಬ್ ಮಡಂತ್ಯಾರ್ ಮತ್ತು ಇಂಡಿಯನ್ ರೆಡ್ ಕ್ರಾಸ್ ಮಂಗಳೂರು ವತಿಯಿಂದ ಬೃಹತ್ ರಕ್ತದಾನ ಶಿಬಿರವನ್ನು ಇಂದು ಆಯೋಜಿಸಲಾಯಿತು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಸೇಕ್ರೆಡ್ ಹಾರ್ಟ್ ವಿಧ್ಯಾ ಸಂಸ್ಥೆಯ ಸಂಚಾಲಕರಾದ ರೆ.ಫಾ ಬೇಸಿಲ್ ವಾಸ್ ರವರು ಗಿಡಕ್ಕೆ ನೀರುಣಿಸುವ ಮೂಲಕ ಶಿಬಿರವನ್ನು ಉದ್ಘಾಟಿಸಿ ರಕ್ತದಾನ ಮಾಡುವುದರಿದ ಒಂದು ಜೀವಕ್ಕೆ ಉಡುಗೊರೆ ನೀಡಬಹುದು ಎಂಬ ಸಂದೇಶ ನೀಡಿದರು.
ಮುಖ್ಯ ಅತಿಥಿಯಾದ ಇಂಡಿಯನ್ ರೆಡ್ ಕ್ರಾಸ್ ಸೊಸೈಟಿ ಬ್ಲಡ್ ಬ್ಯಾಂಕ್ ಕಾರ್ಯದರ್ಶಿ ಪ್ರವೀಣ್ ಮಡಂತ್ಯಾರ್ ರೆಡ್ ಕ್ರಾಸ್ ಸೊಸೈಟಿ ರಕ್ತದಾನ ಶಿಬಿರ ಏರ್ಪಡಿಸಿ ಅಗತ್ಯವುಳ್ಳವರಿಗೆ ಉಚಿತವಾಗಿ ರಕ್ತವನ್ನು ಒದಗಿಸುತ್ತದೆ ಎಂದು ತಿಳಿಸಿದರು.
ರೋಟರಿ ಕ್ಲಬ್ ಅಧ್ಯಕ್ಷ ಕಾಂತಪ್ಪ ಗೌಡ, ಕಾರ್ಯದರ್ಶಿ ಮ್ಯಾಕ್ಸಿಮ್ ಅಲ್ಬುಕರ್ಕ್ ಹಾಗೂ ಕಾಲೇಜಿನ ಸಂಘ ಸಂಸ್ಥೆಗಳ ಸದಸ್ಯರು ಉಪಸ್ಥಿತರಿದ್ದರು.
ಕಾಲೇಜಿನ ಪ್ರಾಂಶುಪಾಲರಾದ ಡಾ ಜೋಸೆಫ್ ಎಂ ಎನ್ ತಾವೇ ಸ್ವತಃ ರಕ್ತದಾನ ಮಾಡಿ ರಕ್ತದಾನದ ಮಹತ್ವವನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು.
ಕೋವಿಡ್ 19 ರ ವಿಷಮ ಪರಿಸ್ಥಿತಿಯಲ್ಲಿ ಅನೇಕ ಕಾಯಿಲೆ ಯಿಂದ ಬಳಲುತ್ತಿರುವ ರೋಗಿಗಳಿಗೆ ರಕ್ತ ಒದಗಿಸುವುದು ಕಷ್ಟಾವಾಗುತ್ತಿದೆ. ಇಂತಹ ಸಮಯದಲ್ಲಿ ರೋಗಿಗಳಿಗೆ ರಕ್ತ ಒದಗಿಸಲು ಶಿಬಿರದಲ್ಲಿ ಆರೋಗ್ಯವಂತ ವ್ಯಕ್ತಿಗಳಿಂದ ರಕ್ತ ಸಂಗ್ರಹಿಸಲಾಯಿತು. ದಾಖಲೆಯ 153 ಯೂನಿಟ್ ರಕ್ತ ಸಂಗ್ರಹವಾಯಿತು.
ಈ ಕಾರ್ಯಕ್ಕೆ ಸಾರ್ವಜನಿಕರು ,ವಿದ್ಯಾರ್ಥಿಗಳು ಹಾಗೂ ಶಿಕ್ಷಕ ವೃಂದದವರು ಸಹಕಾರ ನೀಡಿ ರಕ್ತದಾನ ಶಿಬಿರವನ್ನು ಯಶಸ್ವಿಗೊಳಿಸಿದರು.
ಕಾಲೇಜಿನ ವಿದ್ಯಾರ್ಥಿನಿ ಶ್ವೇತಾ ಕಾರ್ಯಕ್ರಮ ನಿರೂಪಿಸಿದರು ಮತ್ತು ವಿದ್ಯಾರ್ಥಿ ಶಾಹಿದ್ ಆಫ್ರಿದ್ ವಂದಿಸಿದರು.
ವರದಿ:
ಶ್ರೇಯಸ್ ಅಂತರ
ಮಡಂತ್ಯಾರ್