ಮ್ಯಾನುವಲ್ ಸ್ಕ್ಯಾವೆಂಜರಗಳ ಸಮೀಕ್ಷೆ

 ಮ್ಯಾನುವಲ್ ಸ್ಕ್ಯಾವೆಂಜರಗಳ ಸಮೀಕ್ಷೆ
Share this post

ಮಂಗಳೂರು, ನ 26, 2021: ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದಲ್ಲಿ ಮ್ಯಾನ್ಯುಯಲ್ ಸ್ಕ್ಯಾವೆಂಜರ್ ಗಳ ಸಮೀಕ್ಷೆ ಕೈಗೊಳ್ಳಲಾಗಿದ್ದು, ಮ್ಯಾನ್ಯುಯಲ್ ಸ್ಕ್ಯಾವೆಂಜರ್ ನಿಷೇಧ ಮತ್ತು ಪುನರ್ವಸತಿ ಕಾಯಿದೆ-2013 (The Prohibition of Employment As Manual Scavenger and Rehabilitation Act 2013) ರ ಅಡಿಯಲ್ಲಿ ಜಿಲ್ಲೆಯ 223 ಗ್ರಾಮ ಪಂಚಾಯಿತಿಗಳಲ್ಲಿ ಡಿಸೆಂಬರ್ 3 ರಿಂದ 8 ರವರೆಗೆ ಸಮೀಕ್ಷೆ ಮತ್ತು ಕ್ಯಾಂಪ್‍ಗಳನ್ನು ಆಯೋಜಿಸಲಾಗಿದೆ.

ಒಣ ಶೌಚಾಲಯಗಳನ್ನು ಸ್ವಚ್ಛಗೊಳಿಸುವವರು, ಅನೈರ್ಮಲ್ಯ ಶೌಚಾಲಯಗಳಿಂದ ಹೊರಹೋಗಿ ತೆರೆದ ಚರಂಡಿಯಲ್ಲಿ ಸಂಗ್ರಹವಾಗುವ ಮಾನವ ಮಲವನ್ನು ಸ್ವಚ್ಛಗೊಳಿಸುವವರು ಮತ್ತು ಶೌಚಾಲಯದ ಮಲಗುಂಡಿಗಳನ್ನು ದೈಹಿಕವಾಗಿ ಸ್ವಚ್ಚಗೊಳಿಸುವ ವ್ಯಕ್ತಿಗಳು, ಗ್ರಾಮ ಪಂಚಾಯಿತಿಗಳಲ್ಲಿ ಆಯೋಜಿಸಲಾಗಿರುವ ಸಮೀಕ್ಷೆ ಮತ್ತು ಗುರುತಿಸುವಿಕೆಯ ಶಿಬಿರದಲ್ಲಿ ಸ್ವಯಂ ಪ್ರೇರಿತರಾಗಿ ಭಾಗವಹಿಸಬಹುದು.

ಸಮೀಕ್ಷಾ ಕ್ಯಾಂಪ್‍ಗಳಲ್ಲಿ ಭಾಗವಹಿಸಲು ಇಚ್ಛಿಸುವವರು ಪಾಸ್‍ಪೋರ್ಟ್ ಅಳತೆಯ ಒಂದು ಭಾವಚಿತ್ರ ಹಾಗೂ ಕುಟುಂಬದ ಸದಸ್ಯರನ್ನೊಳಗೊಂಡ ಒಂದು ಭಾವಚಿತ್ರ, ಬ್ಯಾಂಕ್ ಖಾತೆಯ ಪಾಸ್‍ಬುಕ್‍ನ ಮುಖಪುಟದ ಪ್ರತಿ (ಮೂಲ ಪುಸ್ತಕ), ಆಧಾರ್ ಪ್ರತಿ (ಮೂಲ ಪತ್ರಿ),  ಮ್ಯಾನುವಲ್ ಸ್ಕ್ಯಾವೆಂಜಿಂಗ್ ಕಾರ್ಯನಿರ್ವಹಿಸುತ್ತಿರುವ ಅನೈರ್ಮಲ್ಯ ಶೌಚಾಲಯದ ಸ್ಥಳದ ವಿವರಗಳನ್ನು ಸಮೀಕ್ಷಾ ಕ್ಯಾಂಪ್‍ಗಳಲ್ಲಿ ನೀಡಿ ಶಿಬಿರದಲ್ಲಿ ನೋಂದಾಯಿಸಿಕೊಳ್ಳಬಹುದಾಗಿದೆ.

ಹೆಚ್ಚಿನ ವಿವರಗಳಿಗಾಗಿ ಸಂಬಂಧಪಟ್ಟ ಗ್ರಾಮ ಪಂಚಾಯತ್ ಕಚೇರಿಗಳನ್ನು ಸಂಪರ್ಕಿಸಬಹುದು ಎಂದು ಜಿಲ್ಲಾ ಪಂಚಾಯತ್‍ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ  ಡಾ.ಕುಮಾರ್ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!