ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ

 ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ನಿಯಮ ಪಾಲನೆ ಕಡ್ಡಾಯ
Share this post

ಉಡುಪಿ, ನ 29, 2021: ಉಡುಪಿ ನಗರಸಭೆ ವ್ಯಾಪ್ತಿಯಲ್ಲಿ ಕೋವಿಡ್ ಹರಡುವುದನ್ನು ತಡೆಗಟ್ಟುವ ಕುರಿತು ಸಾರ್ವಜನಿಕರು ನಿಯಮಾವಳಿಗಳನ್ನು ಪಾಲಿಸದೇ ಇರುವುದು ಕಂಡುಬರುತ್ತಿದ್ದು ರೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕರು ಕಟ್ಟುನಿಟ್ಟಾಗಿ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಯ್ದುಕೊಳ್ಳುವುದು ಕಡ್ಡಾಯವಾಗಿರುತ್ತದೆ.    

ವಾಣಿಜ್ಯ ಮಳಿಗೆಗಳು, ಮಾಲ್‌ಗಳು ಹಾಗೂ ಇನ್ನಿತರ ಉದ್ದಿಮೆಗಳಲ್ಲಿ ಸ್ಯಾನಿಟೈಸರ್ ಬಳಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಪ್ರವೇಶ ದ್ವಾರದಲ್ಲಿ ತಾಪಮಾನ ಪರಿಶೀಲಿಸುವುದನ್ನು ಕಡ್ಡಾಯವಾಗಿ ಪಾಲಿಸಬೇಕು ಮತ್ತು ರೋಗ ಲಕ್ಷಣ ಇರುವವರಿಗೆ ಪ್ರವೇಶ ನೀಡಬಾರದು. ತಪ್ಪಿದ್ದಲ್ಲಿ ವಿಪತ್ತು ನಿರ್ವಹಣಾ ಕಾಯ್ದೆ 2005 ರ ಸೆಕ್ಷನ್ 51 ರಿಂದ 60 ಹಾಗೂ ಭಾರತ ದಂಡ ಸಂಹಿತೆ ಮತ್ತು ಅನ್ವಯವಾಗಬಹುದಾದ ಇತರ ಕಾನೂನು ಉಪಬಂಧಗಳ ಅನುಸಾರ ಕಠಿಣ ಕ್ರಮ ಕೈಗೊಳ್ಳಲಾಗುವುದು.

ಸಾರ್ವಜನಿಕರು ಮಾಸ್ಕ್ ಧರಿಸದೇ, ಸಾಮಾಜಿಕ ಅಂತರ ಕಾಪಾಡದೇ ಇದ್ದಲ್ಲಿ ನಗರಸಭೆಯ ವತಿಯಿಂದ ದಂಡ ವಿಧಿಸಲಾಗುವುದು ಎಂದು ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!