ಮಂಗಳೂರು: ಡಿಸೆಂಬರ್ 1 ರಂದು ವಿದ್ಯುತ್ ವ್ಯತ್ಯಯ
ಮಂಗಳೂರು, ನ 30, 2021: ನಗರದ 33/11ಕೆವಿ ನೆಹರೂ ಮೈದಾನ ಉಪಕೇಂದ್ರದಿಂದ ಹೊರಡುವ 11ಕೆವಿ ಎಂ.ಪಿ.ಟಿ ಫೀಡರ್ ನಲ್ಲಿ ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್ ದುರಸ್ತಿ ಕಾಮಗಾರಿ ಕೈಗೊಳ್ಳಲಾಗಿದೆ.
ಆದಕಾರಣ ಡಿಸೆಂಬರ್ 1ರ ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ಬಂದರು ಪೋಲೀಸ್ ಸ್ಟೇಷನ್, ಗಾಂಧಿ ಸನ್ಸ್, ನೂರ್ ಮೊಹಮ್ಮದ್, ಅಜೀಜುದ್ದೀನ್ ರಸ್ತೆ, ಛೇಂಬರ್ ರೋಡ್ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದೆ ಎಂದು ಮೆಸ್ಕಾಂನ ಪ್ರಕಟಣೆ ತಿಳಿಸಿದೆ.