ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್

 ಕೊಲ್ಲೂರು ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದ ಥಾವರ್ ಚಂದ್ ಗೆಹ್ಲೋಟ್
Share this post

ಕೊಲ್ಲೂರು, ಡಿ 03, 2021: ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಇಂದು ಕೊಲ್ಲೂರು ಶ್ರೀ ಮೂಕಾಂಬಿಕೆಗೆ ವಿಶೇಷ ಪೂಜೆ ಸಲ್ಲಿಸಿದರು.

ದೇವಸ್ಥಾನಕ್ಕೆ ಆಗಮಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಪೂರ್ಣಕುಂಭ ಸ್ವಾಗತ ನೀಡಲಾಯಿತು.

ನಂತರ ದೇವಾಲಯದಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಿದ ರಾಜ್ಯಪಾಲರು ತುಪ್ಪದ ದೀಪದಿಂದ ಆರತಿ ಬೆಳಗಿದರು. ಬ್ರಹ್ಮಾರ್ಪಣ ನೆರವೇರಿಸಿದರು ಹಾಗೂ ಅರ್ಚನೆ ಮಾಡಿಸಿದರು.

ದೇವಾಲಯದ ಆವರಣದಲ್ಲಿ ವೀರಭದ್ರಸ್ವಾಮಿ ದೇವರಿಗೆ ಪೂಜೆ ಸಲ್ಲಿಸಿ, ದೇವಾಲಯ ಪ್ರದಕ್ಷಿಣೆ ಮಾಡಿದ ರಾಜ್ಯಪಾಲರು ದೇವರ ಚಿನ್ನದ ರಥ ವೀಕ್ಷಿಸಿದರು.

ಬೈಂದೂರು ಶಾಸಕ ಸುಕುಮಾರ ಶೆಟ್ಟಿ, ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ನವೀನ್ ಭಟ್ ,ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್, ಕುಂದಾಪುರ ಉಪ ವಿಭಾಗಾಧಿಕಾರಿ ರಾಜು ,ಬೈಂದೂರು ತಹಸಿಲ್ದಾರ್ ಶೋಭಾಲಕ್ಷ್ಮಿ , ಎಎಸ್ಪಿ ಕುಮಾರ ಚಂದ್ರ , ದೇವಾಲಯದ ಪ್ರಧಾನ ಅರ್ಚಕರು ಮತ್ತು ಸಿಬ್ಬಂದಿಗಳು ಹಾಗೂ ದೇವಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತಿತರರು ಉಪಸ್ಥಿತರಿದ್ದರು.

Subscribe to our newsletter!

Other related posts

error: Content is protected !!
WhatsApp us
Click here to join our WhatsApp Group