ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅರ್ಜಿ ಆಹ್ವಾನ

 ಶಾಲೆಗಳ ಮಾನ್ಯತೆ ನವೀಕರಣಕ್ಕೆ ಅರ್ಜಿ ಆಹ್ವಾನ
Share this post

ಮಂಗಳೂರು, ಡಿ 06, 2021: ಜಿಲ್ಲೆಯ ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಪ್ರಥಮ ಮಾನ್ಯತೆ ಹಾಗೂ ಮಾನ್ಯತೆ ನವೀಕರಕ್ಕಾಗಿ ಅರ್ಜಿ ಆಹ್ವಾನಿಸಲಾಗಿದೆ.

ಖಾಸಗಿ ಅನುದಾನಿತ ಹಾಗೂ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಯವರು ಅರ್ಜಿಗಳನ್ನು ಆನ್‍ಲೈನ್ ಮೂಲಕವೇ ಡಿ.14 ರೊಳಗೆ ಸಲ್ಲಿಸಬೇಕು.

ಆನ್‍ಲೈನ್‍ನಲ್ಲಿ ಅರ್ಜಿಗಳನ್ನು ಸಲ್ಲಿಸುವುದರ ಜೊತೆಗೆ ಸಂಸ್ಥೆಯ ‘ಅಗ್ನಿ ಸುರಕ್ಷತಾ” ಹಾಗೂ ‘ಕಟ್ಟಡ ಸುರಕ್ಷತಾ ಪ್ರಮಾಣ ಪತ್ರ’ ಗಳನ್ನು ತಂತ್ರಾಂಶದಲ್ಲಿ ಕಡ್ಡಾಯವಾಗಿ ಅಪ್‍ಲೋಡ್ ಮಾಡಬೇಕು.

ಅರ್ಜಿಗಳನ್ನು ಆಫ್‍ಲೈನ್ ಮೂಲಕ ಸಲ್ಲಿಸಲು ಅವಕಾಶ ಇಲ್ಲ.

ಅರ್ಜಿಗಳನ್ನು ಇಲಾಖಾ www.schooleducation.kar.nic.in ನಲ್ಲಿನ Application Submission for First Recognition and Renewal of recognition ಆಯ್ಕೆಯನ್ನು ಬಳಸಿಕೊಂಡು ಭರ್ತಿ ಮಾಡಬೇಕು ಎಂದು ಸಾರ್ವಜನಿಕ ಶಿಕ್ಷಣ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!