ಚಂಪಾ ಷಷ್ಠಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ

 ಚಂಪಾ ಷಷ್ಠಿ ಪ್ರಯುಕ್ತ ಮದ್ಯ ಮಾರಾಟ ನಿಷೇಧ
Share this post

ಮಂಗಳೂರು, ಡಿ 07, 2021: ಕುಕ್ಕೆ ಶ್ರೀ. ಸುಬ್ರಹ್ಮಣ್ಯ ದೇವಸ್ಥಾನದ ವಾರ್ಷಿಕ ಚಂಪಾ ಷಷ್ಠಿ ಮಹೋತ್ಸವ ಪ್ರಯುಕ್ತ ಡಿ.10 ರ ವರೆಗೆ ನಡೆಯಲಿರುವ ರಥೋತ್ಸವಗಳ ಸಮಯದಲ್ಲಿ ಅಪಾರ ಭಕ್ತಾದಿಗಳು ಸೇರಲಿದ್ದಾರೆ.

ಕುಕ್ಕೆ ಶ್ರೀ. ಸುಬ್ರಹ್ಮಣ್ಯದ ಪರಿಸರದಲ್ಲಿ ಶಾಂತಿ ಮತ್ತು ಸುವ್ಯವಸ್ಥೆಯನ್ನು ಕಾಪಾಡುವ ಹಿತದೃಷ್ಟಿಯಿಂದ ಮದ್ಯ ಮಾರಾಟ ಮತ್ತು ಸಾಗಾಣಿಕೆಯನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ ಆದೇಶಿಸಿದ್ದಾರೆ.

ಜಿಲ್ಲಾಧಿಕಾರಿ ಕರ್ನಾಟಕ ಅಬಕಾರಿ ಕಾಯಿದೆ 1965 ರ ಸೆಕ್ಷನ್ 21 (1) ರ ಅಡಿಯಲ್ಲಿ ದತ್ತವಾದ ಅಧಿಕಾರವನ್ನು ಚಲಾಯಿಸಿ ಸುಬ್ರಹ್ಮಣ್ಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಇಂಚಾಡಿ ಬಳಿಯಿರುವ ಪ್ರಶಾಂತ್ ಬಾರ್ ಅಂಡ್ ರೆಸ್ಟೋರೆಂಟ್ ಮತ್ತು ಬೆಳ್ಳಿ ಬಾರ್ ಅಂಡ್ ರೆಸ್ಟೋರೆಂಟ್ ಅನ್ನು ಡಿ. 8 ರ ಬೆಳಿಗ್ಗೆ 6 ಗಂಟೆಯಿಂದ ಡಿ. 9 ರ ಮಧ್ಯರಾತ್ರಿ 12 ಗಂಟೆಯವರೆಗೆ ಮುಚ್ಚುವಂತೆ ಸೂಚಿಸಿದ್ದಾರೆ.

Subscribe to our newsletter!

Other related posts

error: Content is protected !!