ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್

 ಡಿಸೆಂಬರ್ 18 ರಂದು ಮೆಗಾ ಲೋಕ್ ಅದಾಲತ್
Share this post

ಮಂಗಳೂರು, ಡಿ 07, 2021: ಇದೇ ಡಿಸೆಂಬರ್ 18 ರಂದು ರಾಜ್ಯಾದ್ಯಂತ ಮೆಗಾ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ಈ ಅದಾಲತ್‍ನಲ್ಲಿ ಸಾರ್ವಜನಿಕರು ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಹಾಗೂ ವ್ಯಾಜ್ಯ ಪೂರ್ವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ.

ಇದಕ್ಕಾಗಿ ದಕ್ಷಿಣ ಕನ್ನಡ ಜಿಲ್ಲೆಯ ಕಾನೂನು ಸೇವೆಗಳ ಪ್ರಾಧಿಕಾರ ತಾಲೂಕು ಕಾನೂನು ಸೇವೆಗಳ ಸಮಿತಿಗಳಿಗೆ ಆನ್‍ಲೈನ್, ವಿಡಿಯೋ ಕಾನ್ಪರೆನ್ಸ್, ಇ-ಮೇಲ್, ಎಸ್‍ಎಂಎಸ್, ವಾಟ್ಸ್ ಅಪ್, ಎಲೆಕ್ಟ್ರಾನಿಕ್ ಮೋಡ್ ಅಥವಾ ಖುದ್ದಾಗಿ ಹಾಜರಾಗಿ ಮಾಹಿತಿ ಪಡೆಯಬಹುದು.

ನ್ಯಾಯಾಲಯದಲ್ಲಿ ಬಾಕಿ ಇರುವ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ತಾಲೂಕು ಕಾನೂನು ಸೇವೆಗಳ ಸಮಿತಿಗಳನ್ನು ಅಥವಾ ಖಾಯಂ ಜನತಾ ನ್ಯಾಯಾಲಯವನ್ನು ಆನ್‍ಲೈನ್, ವಿಡಿಯೋ ಕಾನ್ಪರೆನ್ಸ್, ಇ-ಮೇಲ್, ಎಸ್‍ಎಂಎಸ್, ವಾಟ್ಸ್ ಅಪ್, ಎಲೆಕ್ಟ್ರಾನಿಕ್ ಮೋಡ್, ಖುದ್ದಾಗಿ ಸಂಪರ್ಕಿಸಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳುವಂತೆ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ವೃಥ್ವಿರಾಜ್ ವರ್ಣೇಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!