ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ

 ವಿವಿಧ ತರಬೇತಿಗಾಗಿ ಅರ್ಜಿ ಆಹ್ವಾನ
Share this post

ಮಂಗಳೂರು, ಡಿ 11, 2021: ಎಸ್‍ಎಸ್‍ಎಲ್‍ಸಿ, ಐಟಿಐ, ಡಿಪ್ಲೋಮ, ಬಿಇ (ಮೆಕ್ಯಾನಿಕಲ್ ವಿಭಾಗ) ಉತ್ತೀರ್ಣರಾದ ಪರಿಶಿಷ್ಟ ಜಾತಿ ಮತ್ತು ಪಂಗಡದ ನಿರುದ್ಯೋಗಿ ಯುವಕ, ಯುವತಿಯರಿಗೆ ಉದ್ಯೋಗಾವಕಾಶ ಕಲ್ಪಿಸಲು ಉಚಿತ ಕೌಶಲ್ಯಾಭಿವೃದ್ಧಿ ತರಬೇತಿಗೆ ಅರ್ಜಿ ಆಹ್ವಾನಿಸಿದೆ.

ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ ವತಿಯ ವಿಶೇಷ ಘಟಕ ಹಾಗೂ ಗಿರಿಜನ ಉಪಯೋಜನೆಯಡಿ ಸಿಎನ್‍ಸಿ ಟೆಕ್ನಾಲಜಿಸ್ಟ್ (6 ತಿಂಗಳು), ಕ್ಯಾಡ್/ಕ್ಯಾಮ್, ಟರ್ನರ್, ಮಿಲ್ಲರ್, ಗ್ರೈಂಡರ್ (4 ತಿಂಗಳು), ಸಿಎನ್‍ಸಿ ಆಪರೇಟರ್ (4 ತಿಂಗಳು), ಸಿಎನ್‍ಸಿ ಪ್ರೋಗ್ರಾಮರ್, ಟೂಲ್-ರೂಮ್ ಮಷಿನಿಸ್ಟ್ (1 ವರ್ಷ) ತರಬೇತಿ ನೀಡಲಾಗುವುದು.

ತರಬೇತಿ ಅವಧಿಯಲ್ಲಿ ಅಭ್ಯರ್ಥಿಗಳಿಗೆ ತಿಂಗಳಿಗೆ 1500 ರೂ.ಗಳ ಶಿಷ್ಯವೇತನ ನೀಡಲಾಗುವುದು.

ಅರ್ಜಿ ನಮೂನೆ ಹಾಗೂ ಹೆಚ್ಚಿನ ಮಾಹಿತಿಗೆ ಪ್ರಾಂಶುಪಾಲರು, ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರ (ಜಿಟಿಟಿಸಿ), ನಂ-7ಇ, ಬೈಕಂಪಾಡಿ, ಮಂಗಳೂರು, ದೂರವಾಣಿ:0824-2408003, 9880591219 ಅನ್ನು ಸಂಪರ್ಕಿಸುವಂತೆ ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದ ಪ್ರಾಂಶುಪಾಲರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!