ಕಾಲು ಬಾಯಿ ಜ್ವರಕ್ಕೆ ಡಿ 17 ರಿಂದ ಉಚಿತ ಲಸಿಕೆ

 ಕಾಲು ಬಾಯಿ ಜ್ವರಕ್ಕೆ ಡಿ 17 ರಿಂದ ಉಚಿತ ಲಸಿಕೆ
Share this post

ಮಂಗಳೂರು ಡಿ.14, 2021: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಮತ್ತು ದಕ್ಷಿಣ ಕನ್ನಡ ಸಹಕಾರಿ ಹಾಲು ಉತ್ಪಾದಕರ ಒಕ್ಕೂಟ ನಿಯಮಿತ ವತಿಯಿಂದ ರಾಷ್ಟ್ರೀಯ ಜಾನುವಾರು ರೋಗ ನಿಯಂತ್ರಣ ಕಾರ್ಯಕ್ರಮದ (ಓಂಆಅP) ಅಂಗವಾಗಿ ಜಿಲ್ಲೆಯಾದ್ಯಂತ ಡಿ.17 ರಿಂದ 2022ರ ಜನವರಿ 15 ರವರೆಗೆ ಕಾಲು ಬಾಯಿ ಜ್ವರದ ಉಚಿತ ಲಸಿಕೆಯ 2ನೇ ಸುತ್ತಿನ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ವೈರಸ್‍ನಿಂದ ಹರಡುವ ಸಾಂಕ್ರಾಮಿಕ ರೋಗವಾದ ಕಾಲು ಬಾಯಿ ಜ್ವರಕ್ಕೆ ಲಸಿಕೆ ಹಾಕಿಸುವುದರಿಂದ ನಿಯಂತ್ರಣಕ್ಕೆ ಬರುತ್ತದೆ.    
ಜಿಲ್ಲೆಯಲ್ಲಿರುವ 2,50,569 ದನ, 1,832 ಎಮ್ಮೆ ಸೇರಿ ಒಟ್ಟು 2,52,401 ಜಾನುವಾರುಗಳಿದ್ದು ಕಾಲು ಬಾಯಿ ಜ್ವರ ರೋಗದ ಲಸಿಕೆ ಹಾಕಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದ ಯಶಸ್ವಿಗಾಗಿ 38 ತಂಡಗಳನ್ನು ರಚಿಸಲಾಗಿದ್ದು, ಕೆ.ಎಂ.ಎಫ್. ಹಾಗೂ ಪಶುಪಾಲನಾ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗಳು ಮನೆ ಮನೆಗೆ ತೆರೆಳಿ ಲಸಿಕೆಯನ್ನು ಹಾಕಲಿದ್ದಾರೆ.

ಪ್ರತಿ ತಂಡಕ್ಕೆ ಕೆ.ಎಂ.ಎಫ್ ವತಿಯಿಂದ ವಾಹನ ಒದಗಿಸಲಾಗುತ್ತಿದೆ. ಲಸಿಕೆ ಹಾಕುವ ಹಿಂದಿನ ದಿನ ಹಳ್ಳಿಗಳಲ್ಲಿ ವ್ಯಾಪಕ ಪ್ರಚಾರವನ್ನು ನಡೆಸಲಾಗುವುದು. ನಿಗಧಿತ ದಿನದಂದು ರೈತರು ತಮ್ಮ ಜಾನುವಾರುಗಳನ್ನು ಮನೆಯಲ್ಲಿ ಕಟ್ಟಿ ಹಾಕಿ ಲಸಿಕೆ ಹಾಕಲು ಲಸಿಕೆದಾರರೊಂದಿಗೆ ಸಹರಿಸಬೇಕು.

ಜಿಲ್ಲೆಯ ಎಲ್ಲಾ ಜನ ಪ್ರತಿನಿಧಿಗಳು, ಕೆ.ಎಂ.ಎಫ್ ಮಂಡಳಿಯ ಅಧ್ಯಕ್ಷರು ಮತ್ತು ನಿರ್ದೇಶಕರು, ಹಾಲು ಉತ್ಪಾದಕರ ಸಹಕಾರ ಸಂಘಗಳ ಅಧ್ಯಕ್ಷರು ಮತ್ತು ಸದಸ್ಯರು, ಗ್ರಾಮ ಪಂಚಾಯತ್ ಅಧ್ಯಕ್ಷರು ಮತ್ತು ಸದಸ್ಯರು ಈ ಲಸಿಕಾ ಕಾರ್ಯಕ್ರಮದ ಯಶಸ್ವಿಗೆ ಅಗತ್ಯ ಸಹಕಾರವನ್ನು ನೀಡಿ ಈ ರೋಗವನ್ನು ಸಂಪೂರ್ಣವಾಗಿ ನಿರ್ಮೂಲನೆ ಮಾಡಲು ಪಶುಪಾಲನಾ ಇಲಾಖೆಯೊಂದಿಗೆ ಸಾರ್ವಜನಿಕರು ಕೈಜೋಡಿಸುವಂತೆ ಪಶುಪಾಲನಾ ಇಲಾಖೆಯ ಪ್ರಕಟಣೆ ತಿಳಿಸಿದೆ.

Subscribe to our newsletter!

Other related posts

error: Content is protected !!