ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಕೇಂದ್ರ ಆರಂಭ

 ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಕೇಂದ್ರ ಆರಂಭ
Share this post
ಕನಿಷ್ಟ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಕೇಂದ್ರ ಆರಂಭ

ಕಾರವಾರ ಡಿ.15, 2021: ಕನಿಷ್ಟ ಬೆಂಬಲ ಯೋಜನೆಯಡಿ (2021-22) ಭತ್ತಕ್ಕೆ ಬೆಲೆ ನಿಗದಿಪಡಿಸಲಾಗಿದ್ದು, ಜಿಲ್ಲೆಯ ಕುಮಟಾ, ಜೋಯಿಡಾ ಮತ್ತು ಮುಂಡಗೋಡ ಕೆ.ಎಫ್.ಸಿ.ಎಸ್.ಸಿ ಅಕ್ಷರದಾಸೋಹ ಮಳಿಗೆ, ಎಪಿಎಂಸಿ ಯಾರ್ಡ ಹಾಗೂ ಹಳಿಯಾಳ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಎಪಿಎಂಸಿ ಪ್ರಾಂಗಣ, ಬನವಾಸಿ ರೈತ ಸಂಪರ್ಕ ಕೇಂದ್ರದಲ್ಲಿ ಖರೀದಿ ಕೇಂದ್ರವನ್ನು ಪ್ರಾರಂಭಿಸಲಾಗಿದೆ ಎಂದು ಆಹಾರ ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶ ಮಂಜುನಾಥ ರೇವಣಕರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಪ್ರತಿ ಕ್ವಿಂಟಾಲ್ ಭತ್ತಕ್ಕೆ ಸರ್ಕಾರ ಈಗಾಗಲೇ ದರ ನಿಗದಿಪಡಿಸಿದೆ. ಸಾಮಾನ್ಯ ಭತ್ತ ರೂ. 1940 ಹಾಗೂ ಗ್ರೇಡ್ ಎ ಭತ್ತಕ್ಕೆ ರೂ. 1960 ನಿಗದಿ ಪಡಿಸಲಾಗಿದ್ದು, ಬೆಂಬಲ ಬೆಲೆಯಲ್ಲಿ ಖರೀದಿ ಪ್ರಕ್ರಿಯೆಯ ನೊಂದಣಿಗೆ ಡಿ. 30 ಕೊನೆಯ ದಿನವಾಗಿದೆ. ಎಂದು ಅವರು ಹೇಳಿದ್ದಾರೆ.

ಕೃಷಿ ಇಲಾಖೆ ಜಾರಿಗೊಳಿಸಿರುವ “ಫ್ರೂಟ್ಸ್” ದತ್ತಾಂಶದಲ್ಲಿ ನೋಂದಣಿ ಮಾಡಿಕೊಂಡಿರುವ ರೈತರು ಮಾತ್ರ ಈ ಯೋಜನೆಯಲ್ಲಿ ನೋಂದಣಿ ಮಾಡಿಕೊಳ್ಳಲು ಅವಕಾಶವಿರುತ್ತದೆ.

“ಫ್ರೂಟ್ಸ್” ದತ್ತಾಂಶದಲ್ಲಿ ನೋಂದಣಿ ಮಾಡಿಸಲು ರೈತರು ಪಹಣಿ ಪತ್ರ, ಆಧಾರ್ ಸಂಖ್ಯೆ(ಪ್ರತಿ), ಬ್ಯಾಂಕ್ ಅಕೌಂಟ್ ಸಂಖ್ಯೆ, ಐಎಫ್‍ಎಸ್‍ಸಿ ಕೋಡ್, ಬ್ಯಾಂಕಿನ ವ್ಯವಸ್ಥಾಪಕರು ದೃಢೀಕರಿಸಿರುವ ಭಾವಚಿತ್ರವಿರುವ ಪಾಸ್ ಪುಸ್ತಕದ ಪ್ರತಿ ಮತ್ತು ಬೆಳೆ ದೃಢೀಕರಣ ಪತ್ರಗಳನ್ನು ಹಾಜರು ಪಡಿಸಿ ಸಂಬಂಧಿಸಿದ ತಾಲ್ಲೂಕು ರೈತ ಸಂಪರ್ಕ ಕೇಂದ್ರಗಳಲ್ಲಿ ಕಡ್ಡಾಯವಾಗಿ ನೋಂದಣಿ ಮಾಡಿಸಿಕೊಳ್ಳುವುದು.

ಮೇಲಿನ ಖರೀದಿ ಕೇಂದ್ರಗಳಲ್ಲಿ ನೋಂದಣಿ ಪ್ರಕ್ರಿಯೆಯೂ ಚಾಲ್ತಿಯಲ್ಲಿದ್ದು, “ಫ್ರೂಟ್ಸ್” ನೋಂದಾಯಿತ ಸಂಖ್ಯೆಯೊಂದಿಗೆ ಸದರಿ ಕೇಂದ್ರಗಳಲ್ಲಿ ನೋಂದಾಯಿಸಿದ ರೈತರಿಂದ ಮಾತ್ರ ಭತ್ತ ಖರೀದಿಸಲಾಗುವುದು.

ಅಕ್ಕಿ ಗಿರಣಿ ಮಾಲೀಕರಿಂದ ಭತ್ತದ ವಿವರ ಲಭ್ಯವಾದ ತಕ್ಷಣ ಖರೀದಿ ಏಜೆನ್ಸಿಗಳಿಂದ ಭತ್ತವನ್ನು ಸರಬರಾಜು ಮಾಡಿದ ರೈತರಿಗೆ
ಡಿಬಿಟಿ ಮೂಲಕ ಹಣವನ್ನು ಬ್ಯಾಂಕ್ ಖಾತೆಗೆ ನೇರವಾಗಿ ವರ್ಗಾಯಿಸಲಾಗುವುದು. ಗರಿಷ್ಟ 40 ಕ್ವಿಂಟಲ್ ಪ್ರತಿ ರೈತರಿಂದ (1 ಎಕರೆಗೆ 25 ಕ್ವಿಂಟಲ್) ಖರೀದಿ ಮಾಡಲಾಗುವುದು.

ಭತ್ತ ಖರೀದಿಗೆ ಸಂಬಂಧಿಸಿದಂತೆ ಕರ್ನಾಟಕ ಆಹಾರ ಮತ್ತು ನಾಗರಿಕ ಸರಬರಾಜು ನಿಗಮದ ಕಛೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಆರಂಭಿಸಿದ್ದು, ಅದರ ದೂರವಾಣಿ 08382-226243, 9482212820 ಆಗಿರುತ್ತದೆ ಎಂದು ಆಹಾರ ಇಲಾಖೆ ಉಪನಿರ್ದೇಶಕ ಮಾಹಿತಿ ನೀಡಿದ್ದಾರೆ.

Subscribe to our newsletter!

Other related posts

error: Content is protected !!