ಡಿ. 17 ರಂದು ಸಾರ್ವಜನಿಕ ಸಮಾಲೋಚನಾ ಸಭೆ
ಮಂಗಳೂರು ಡಿ.15, 2021: ಕ್ವಿಮಿಪ್ ಟ್ರಾಂಚ್-2ರಡಿ ರಾಜ್ಯ ಸರ್ಕಾರವು ಎಡಿಬಿ ನೆರವಿನೊಂದಿಗೆ ಮಂಗಳೂರು ನಗರಕ್ಕೆ 24 ಗಂಟೆಗಳ ನೀರು ಸರಬರಾಜು ಮಾಡುವ ಯೋಜನೆಯನ್ನು ಮಂಗಳೂರು ಮಹಾನಗರ ಪಾಲಿಕೆ ಹಾಗೂ ಕೆಯುಐಡಿಎಫ್ಸಿ ಸಹಯೋಗದಲ್ಲಿ ಅನುಷ್ಠಾನಗೊಳಿಸುತ್ತಿದೆ.
ಈ ಬಗ್ಗೆ ಸಾರ್ವಜನಿಕರಿಗೆ ಮಾಹಿತಿ ನೀಡಲು ಕಣ್ಣೂರು ವಾರ್ಡ್ ನಂ-52ರಲ್ಲಿರುವ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಡಿ.17ರ ಶುಕ್ರವಾರ ಸಂಜೆ 5 ಗಂಟೆಗೆ ಸಾರ್ವಜನಿಕ ಸಮಾಲೋಚನಾ ಸಭೆ ಹಮ್ಮಿಕೊಳ್ಳಲಾಗಿದೆ.
ವಾರ್ಡ್ನ ಮುಖಂಡರು, ಸಂಘ ಸಂಸ್ಥೆಗಳ ಪ್ರತಿನಿಧಿಗಳು ಹಾಗೂ ಸಾರ್ವಜನಿಕರು ಈ ಸಭೆಯಲ್ಲಿ ಭಾಗವಹಿಸಿ ಕಾಮಗಾರಿಗಳ ಸಮರ್ಪಕ ನಿರ್ವಹಣೆ ಕುರಿತು ತಮ್ಮ ಸಲಹೆ, ಸೂಚನೆಗಳನ್ನು ನೀಡಬಹುದು ಎಂದು ಮಂಗಳೂರು ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.