ಡಿ.30 ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟ

 ಡಿ.30 ರಂದು ಜಿಲ್ಲಾ ಮಟ್ಟದ ಮುಕ್ತ ಚೆಸ್, ಕೇರಂ ಕ್ರೀಡಾಕೂಟ
Share this post

ಮಂಗಳೂರು, ಡಿ.20, 2021: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತಾಶ್ರಯದಲ್ಲಿ 2021-22ನೇ ಸಾಲಿಗೆ 18 ವರ್ಷ ಮೇಲ್ಪಟ್ಟ ಪುರುಷ ಮತ್ತು ಮಹಿಳೆಯರಿಂದ ಜಿಲ್ಲಾ ಮಟ್ಟದ ಮುಕ್ತ ಚೆಸ್ ಮತ್ತು ಕೇರಂ ಕ್ರೀಡಾಕೂಟದಲ್ಲಿ ಭಾಗವಹಿಸಲು ಅರ್ಜಿ ಆಹ್ವಾನಿಸಲಾಗಿದೆ.

ಕ್ರೀಡಾಕೂಟ  ಡಿ.30 ಬೆಳಿಗ್ಗೆ 8 ಗಂಟೆಗೆ ನಗರದ ಮಂಗಳಾ ಕ್ರೀಡಾಂಗಣ ಸಂಕೀರ್ಣದಲ್ಲಿರುವ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ಆಯೋಜಿಸಲಾಗಿದೆ.

ಭಾಗವಹಿಸುವ ಕ್ರೀಡಾಪಟುಗಳು ಡಿ.27ರ ಸೋಮವಾರ ಸಂಜೆ 5 ಗಂಟೆಯೊಳಗಾಗಿ ನಿಗದಿತ ನಮೂನೆಯಲ್ಲಿ ಭರ್ತಿ ಮಾಡಿದ ಅರ್ಜಿಯನ್ನು ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ದಕ್ಷಿಣ ಕನ್ನಡ ಜಿಲ್ಲೆ ಇವರಿಗೆ ಸಲ್ಲಿಸಬೇಕು.

ಭಾಗವಹಿಸುವ ಕ್ರೀಡಾಪಟುಗಳು ಸ್ಪರ್ಧೆ ನಡೆಯುವ ದಿನಾಂಕದಂದು ಬೆಳಿಗ್ಗೆ 8 ಗಂಟೆಯೊಳಗೆ ಯು.ಎಸ್. ಮಲ್ಯ ಒಳಾಂಗಣ ಕ್ರೀಡಾಂಗಣದಲ್ಲಿ ವರದಿ ಮಾಡಿಕೊಳ್ಳಬೇಕು.

ಹೆಚ್ಚಿನ ಮಾಹಿತಿಗೆ ಉಪ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳಾ ಕ್ರೀಡಾಂಗಣ, ಮಂಗಳೂರು, ದೂ.ಸಂಖ್ಯೆ:0824-2451264 ಹಾಗೂ ಕ್ರೀಡಾಕೂಟದ ನೋಡಲ್ ಅಧಿಕಾರಿ ವಿನೋದ್ ಕುಮಾರ್ ಮೊ.ಸಂಖ್ಯೆ: 9845026869 ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

error: Content is protected !!