ಡಿ.28 ರಂದು ಪುತ್ತೂರು ವಕೀಲರ ಸಂಘದ ಕಟ್ಟಡ ಉದ್ಘಾಟನೆ
ಮಂಗಳೂರು ಡಿ.27, 2021: ದಕ್ಷಿಣ ಕನ್ನಡ ಜಿಲ್ಲಾ ನ್ಯಾಯಾಂಗ, ಲೋಕೋಪಯೋಗಿ ಇಲಾಖೆ ಹಾಗೂ ಪುತ್ತೂರು ವಕೀಲರ ಸಂಘದ ಸಂಯುಕ್ತಾಶ್ರಯದಲ್ಲಿ ಡಿ.28ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಪುತ್ತೂರಿನ ಆನೆಮಜಲಿನಲ್ಲಿ ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ.
ಸರ್ವೋಚ್ಚ ನ್ಯಾಯಾಲಯದ ಮಾನ್ಯ ನ್ಯಾಯಮೂರ್ತಿಗಳಾದ ಎಸ್. ಅಬ್ದುಲ್ ನಜೀರ್ ಅವರು ನೂತನವಾಗಿ ನಿರ್ಮಿಸಿರುವ ವಕೀಲರ ಸಂಘದ ಕಟ್ಟಡದ ಉದ್ಘಾಟನೆಯನ್ನು ನೆರವೇರಿಸುವರು.
ಕರ್ನಾಟಕ ಹೈಕೋರ್ಟ್ನ ಮುಖ್ಯ ನ್ಯಾಯಮೂರ್ತಿಗಳಾದ ನ್ಯಾ. ರಿತು ರಾಜ್ ಅವಸ್ಥಿ ಅವರು, ಸಣ್ಣ ನೀರಾವರಿ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಮತ್ತು ಶಾಸನ ರಚನೆ ಇಲಾಖೆಯ ಸಚಿವರಾದ ಜೆ.ಸಿ. ಮಾಧುಸ್ವಾಮಿ ಮತ್ತು ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವರಾದ ಎಸ್.ಅಂಗಾರ ಅವರು ಘನ ಉಪಸ್ಥಿತಿ ವಹಿಸುವರು.
ಕರ್ನಾಟಕ ಹೈಕೋರ್ಟ್ನ ನ್ಯಾಯಾಧೀಶರು ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಆಡಳಿತಾತ್ಮಕ ನ್ಯಾಯಾಧೀಶರಾದ ನ್ಯಾಯಮೂರ್ತಿ ಕೆ. ಸೋಮಶೇಖರ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸುವರು.
ವಿಶೇಷ ಅತಿಥಿಗಳಾಗಿ ಕರ್ನಾಟದ ಹೈಕೋರ್ಟ್ನ ನ್ಯಾಯಾಧೀಶರುಗಳಾದ ಮೊಹಮ್ಮದ್ ನವಾಜ್ ಮತ್ತು ಎಸ್. ವಿಶ್ವಜಿತ್ ಶೆಟ್ಟಿ ಹಾಗೂ ಸರ್ವೋಚ್ಚ ನ್ಯಾಯಾಲಯದ ಹೆಚ್ಚುವರಿ ಸಾಲಿಸಿಟರ್ ಜನರಲ್ ಕೆ.ಎಂ. ನಟರಾಜ್ ಭಾಗವಹಿಸುವರು.
ವಿಶೇಷ ಆಹ್ವಾನಿತರಾಗಿ ಲೋಕಸಭಾ ಸದಸ್ಯರಾದ ನಳೀನ್ ಕುಮಾರ್ ಕಟೀಲ್, ಪುತ್ತೂರು ಶಾಸಕ ಸಂಜೀವ ಮಠಂದೂರು, ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್. ಭೋಜೇಗೌಡ, ಹೆಚ್ಚುವರಿ ಅಡ್ವಕೇಟ್ ಜನರಲ್ ಅರುಣ್ ಶ್ಯಾಮ್, ರಾಜ್ಯ ವಕೀಲರ ಪರಿಷತ್ತ್ನ ಅಧ್ಯಕ್ಷರಾದ ಎಲ್. ಶ್ರೀನಿವಾಸ ಬಾಬು ಹಾಗೂ ವಕೀಲರು, ಸದಸ್ಯರು ಹಾಗೂ ಮಾಜಿ ವಕೀಲರ ಪರಿಷತ್ತ್ ನ ಅಧ್ಯಕ್ಷರಾದ ಪಿ.ಪಿ ಹೆಗ್ಡೆ ಭಾಗವಹಿಸುವರು.