ಜ 6ರಂದು ದಿಶಾ ಸಭೆ

ಮಂಗಳೂರು ಜ.01, 2022: ಕೇಂದ್ರ ಪುರಸ್ಕೃತ ಕಾರ್ಯಕ್ರಮಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಲು ಜಿಲ್ಲಾ ಅಭಿವೃದ್ಧಿ ಸಮನ್ವಯ ಮತ್ತು ಉಸ್ತುವಾರಿ ಸಮಿತಿ(ದಿಶಾ)ಸಭೆ ಇದೇ ಜ.06ರ ಗುರುವಾರ ಬೆಳಿಗ್ಗೆ 10.30ಕ್ಕೆ ನಗರದ ಜಿಲ್ಲಾ ಪಂಚಾಯತ್ ನ ನೇತ್ರಾವತಿ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ.
ಲೋಕಸಭಾ ಸದಸ್ಯರಾದ ನಳಿನ್ ಕುಮಾರ್ ಕಟೀಲ್ ಅವರ ಅಧ್ಯಕ್ಷತೆಯಲ್ಲಿ ದಿಶಾ ಸಭೆ ನಡೆಯಲಿದೆ ಎಂದು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.