ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ: ಕರಡು ಮತದಾರರ ಪಟ್ಟಿಯ ವೇಳಾಪಟ್ಟಿ ಪ್ರಕಟ

 ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ: ಕರಡು ಮತದಾರರ ಪಟ್ಟಿಯ ವೇಳಾಪಟ್ಟಿ ಪ್ರಕಟ
Share this post

ಮಂಗಳೂರು ಜ.10, 2022: ಫೆಬ್ರವರಿ ಹಾಗೂ ಮಾರ್ಚ್ ನಲ್ಲಿ ಅಧಿಕಾರಾವಧಿ ಮುಕ್ತಾಯವಾಗಲಿರುವ ಮಂಗಳೂರು, ಬಂಟ್ವಾಳ ಹಾಗೂ ಬೆಳ್ತಂಗಡಿ ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಗಳಿಗೆ ಕರಡು ಮತದಾರರ ಪಟ್ಟಿಯ ವೇಳಾಪಟ್ಟಿಯನ್ನು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಿಸಿದ್ದಾರೆ.

ವಿವರ ಇಂತಿದೆ:

  • ಜ.03ರ ಸೋಮವಾರ ಕರಡು ಮತದಾರರ ಪಟ್ಟಿ ಪ್ರಕಟಣೆಯ ದಿನ
  • ಜ.03 ರಿಂದ ಜ.15ರ ವರೆಗೆ ಕೃಷಿ ಮತದಾರರ ಪಟ್ಟಿಗೆ ಹಕ್ಕು ಮತ್ತು ಆಕ್ಷೇಪಣೆಗಳನ್ನು ಸಲ್ಲಿಸಬಹುದಾದ ದಿನ.
  • ಜ.17 ರಿಂದ ಜ.23ರ ವರೆಗೆ ಸ್ವೀಕರಿಸಲಾದ ಹಕ್ಕು ಮತ್ತು ಆಕ್ಷೇಪಣೆಗಳನ್ನು ಇತ್ಯರ್ಥಪಡಿಸುವಿಕೆಯ ದಿನ.
  • ಜ.24ರ ಸೋಮವಾರ ಮತದಾರರ ಪಟ್ಟಿಯ ಅಂತಿಮ ಪ್ರಕಟಣೆ ದಿನ.

ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿ ವ್ಯಾಪ್ತಿಯ ಕೃಷಿಕರು ತಮ್ಮ ಹೆಸರು ಸಂಬಂಧ ಪಟ್ಟ ಮತದಾರರ ಪಟ್ಟಿಯಲ್ಲಿ ನೋಂದಣಿಯಾಗಿರುವ ಬಗ್ಗೆ ತಾಲೂಕು ಕಚೇರಿಯಲ್ಲಿ ಲಭ್ಯವಿರುವ ಕರಡು ಮತದಾರರ ಪಟ್ಟಿಯಲ್ಲಿ ಪರಿಶೀಲಿಸಬಹುದಾಗಿದೆ. ಪಟ್ಟಿಯಲ್ಲಿ ಹೆಸರು ನೋಂದಣಿಯಾಗದಿದ್ದಲ್ಲಿ ಜ.03 ರಿಂದ ಜ.15ರ ಅವಧಿಯಲ್ಲಿ ತಹಶೀಲ್ದಾರರಿಗೆ ಹೆಸರು ನೋಂದಾಯಿಸುವಂತೆ ಕೋರಿ ಮನವಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Subscribe to our newsletter!

Other related posts

Leave a Reply

Your email address will not be published. Required fields are marked *

error: Content is protected !!