ಭತ್ತ ಖರೀದಿಗೆ ದರ ನಿಗಧಿ
ಮಂಗಳೂರು ಜ.10, 2022: ಜಿಲ್ಲೆಯಲ್ಲಿ 2021-22ನೇ ಸಾಲಿನ ಮುಂಗಾರು ಋತುವಿನಲ್ಲಿ ಕನಿಷ್ಠ ಬೆಂಬಲ ಬೆಲೆಯಡಿ ಸ್ಥಳೀಯ ಭತ್ತದ ತಳಿಗಳಾದ ಎಮ್.ಓ 4, ಸಹಿತ ಕಜೆ, ಜಯ, ಜ್ಯೋತಿ, ಪಂಚಮುಖಿ, ಸಹ್ಯಾದ್ರಿ ಹಾಗೂ ಉಮಾ ತಳಿಗಳನ್ನು ಖರೀದಿಸಲು ಸರ್ಕಾರದಿಂದ ಅನುಮತಿ ನೀಡಿದೆ.
ಜಿಲ್ಲೆಯ ಎ.ಪಿ.ಎಂ.ಸಿ ಆವರಣದಲ್ಲಿರುವ, ಬೆಳ್ತಂಗಡಿ, ಪುತ್ತೂರು, ಸುಳ್ಯ, ಬಂಟ್ವಾಳ, ಮೂಡಬಿದ್ರಿ ಹಾಗೂ ಮಂಗಳೂರು ಶಕ್ತಿನಗರ ಗೋದಾಮುಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಲಾಗಿದ್ದು, ರೈತರು ನೋಂದಣಿ ಮಾಡಿಕೊಳ್ಳಬಹುದಾಗಿದೆ.
Also read: Cabinet approves MSP for Kharif Crops
ಖರೀದಿ ಕೇಂದ್ರಗಳಲ್ಲಿ ನೋಂದಣಿ ಮಾಡಿದ ರೈತರಿಂದ ಕನಿಷ್ಟ ಬೆಂಬಲಬೆಲೆ ಯೋಜನೆಯಡಿ ಖರೀದಿಸುವ ಭತ್ತ (ಸಾಮಾನ್ಯ) ಕ್ವಿಂಟಾಲ್ಗೆ 1,940 ರೂ.ಗಳು ಹಾಗೂ ಭತ್ತ (ಗ್ರೇಡ್-ಎ) ಕ್ವಿಂಟಾಲ್ಗೆ 1960 ರೂ.ಗಳಂತೆ ದರ ನಿಗದಿಪಡಿಸಲಾಗಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.