ಏಪ್ರಿಲ್ 27 ರಂದು ಧರ್ಮಸ್ಥಳದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ
ಧರ್ಮಸ್ಥಳ, ಜ 24, 2022: ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಏಪ್ರಿಲ್ 27, ಬುಧವಾರದಂದು ಸಂಜೆ 6.50ಕ್ಕೆ ಗೋಧೋಳಿ ಲಗ್ನದಲ್ಲಿ 50ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಆಯೋಜಿಸಲಾಗಿದೆ.
ವರನಿಗೆ ಧೋತಿ, ಶಾಲು ಮತ್ತು ವಧುವಿಗೆ ಸೀರೆ, ರವಿಕೆ ಕಣ ಹಾಗೂ ಮಂಗಳ ಸೂತ್ರ, ಹೂವಿನ ಹಾರ ನೀಡಲಾಗುವುದು. ಎರಡನೇ ವಿವಾಹಕ್ಕೆ ಅವಕಾಶವಿರುವುದಿಲ್ಲ. ಮದುವೆಯ ಎಲ್ಲಾ ವೆಚ್ಚವನ್ನು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಧರ್ಮೋತ್ಥಾನ ಟ್ರಸ್ಟ್ ವತಿಯಿಂದಲೇ ಭರಿಸಲಾಗುವುದು.
ಇದನ್ನೂ ಓದಿ: ಧರ್ಮಸ್ಥಳದಲ್ಲಿ 50 ನೇ ವರ್ಷದ ಉಚಿತ ಸಾಮೂಹಿಕ ವಿವಾಹ ಸಮಾರಂಭ
ವರದಕ್ಷಿಣೆ ಹಾಗೂ ಮದುವೆಗಾಗುವ ದುಂದುವೆಚ್ಚವನ್ನು ತಡೆಯುವ ಉದ್ದೇಶದಿಂದ ಧರ್ಮಾಧಿಕಾರಿಯವರಾದ ಡಾ. ಡಿ. ವೀರೇಂದ್ರ ಹೆಗ್ಗಡೆಯವರು 1972ರಲ್ಲಿ ಆರಂಭಿಸಿದ ಉಚಿತ ಸಾಮೂಹಿಕ ವಿವಾಹವನ್ನು ಪ್ರತಿ ವರ್ಷ ನಡೆಸಲಾಗುತ್ತಿದೆ. ಈತನಕ ಒಟ್ಟು 12,393 ಜೋಡಿ ಸಾಮೂಹಿಕ ವಿವಾಹದಲ್ಲಿ ಮದುವೆಯಾಗಿದ್ದು, ಸುಖ-ಶಾಂತಿ, ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ.
ಇದನ್ನೂ ಓದಿ: 50th Mass Marriage held at Dharmasthala
ಸಾಮೂಹಿಕ ವಿವಾಹದಲ್ಲಿ ಮದುವೆ ಆಗಲಿಚ್ಛಿಸುವವರು ಏಪ್ರಿಲ್ 15ರೊಳಗೆ ಸವಿವರ ಮಾಹಿತಿ ಹಾಗೂ ಸೂಕ್ತ ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08256-266644, ವಾಟ್ಸಪ್ ನಂ. 8147263422 ಸಂಪರ್ಕಿಸಬಹುದು.
2 Comments
ಮದುವೆ ಗಾ ಗಿ
ನನ್ನ ಮದುವೆ ಗಾಗಿ ಸ್ವಾಮಿ ಕರುಣಿಸಿ